ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ. ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆಳ್ತಂಗಡಿ: ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ ಹಾನಿ ಉಂಟುಮಾಡಿತ್ತು. ಬಳಿಕ ಸೋಮವಾರ ಇದೇ ಗ್ರಾಮದ…

    Spread the love

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 34 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ