ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಆನೆಯು ದಿನಾಂಕ 01-07-2020 ರಂದು ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈ ಆನೆ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನ ಸುಮುಹೂರ್ತದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ವಿಧಿ ನೆರವೇರಿಸಿದರು.
ಧರ್ಮಸ್ಥಳದ ಡಾ.ಡಿ.ಹೆಗ್ಗಡೆ ಮೊಮ್ಮಗಳು ಮಾನ್ಯ ಅವರು ಶಿವಾನಿ ಹೆಸರು ಉದ್ಘೋಶಿಸುವ ಮೂಲಕ ನಾಮಕರಣ ಮಾಡಿದರು.
ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ ಆನೆಯ ಮಾವುತ ಕೃಷ್ಣ ರಿಗೆ ಸನ್ಮಾನ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.