ವಿಪತ್ತು ನಿರ್ವಹಣೆಯಲ್ಲಿ ಸಮನ್ವಯ ಮತ್ತು ಸೇವಾಭಾವ ಮುಖ್ಯ

ಸಕಲೇಶಪುರ, ಜುಲೈ 2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಆಶ್ರಯದಲ್ಲಿ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಘಟಕ ಪ್ರತಿನಿಧಿಗಳು ಹಾಗೂ ಸಂಯೋಜಕರ ಕೋರ್ ಕಮಿಟಿ ಸಭೆ ಮತ್ತು ತುರ್ತು ಸ್ಪಂದನಾ ಘಟಕದ ತರಬೇತಿ ಕಾರ್ಯಕ್ರಮ ಸಕಲೇಶಪುರ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಯೋಜನಾಧಿಕಾರಿ ಕಿಶೋರ್ ಅವರು ತುರ್ತು ಪರಿಸ್ಥಿತಿಗಳಲ್ಲಿ ಸ್ವಯಂಸೇವಕರು ಕೈಗೊಳ್ಳಬೇಕಾದ ಕಾರ್ಯವೈಖರಿ, ವಿಪತ್ತು ನಿರ್ವಹಣೆಯ ಮೂಲಭೂತ ಅಂಶಗಳು, ತಂಡದ ಸಮನ್ವಯ, ತುರ್ತು ಸ್ಪಂದನೆ ಹಾಗೂ ಸೇವಾ ಮನೋಭಾವದ ಕುರಿತು ಸಮಗ್ರ ತರಬೇತಿ ಮತ್ತು ಮಾರ್ಗದರ್ಶನ ನೀಡಿದರು.

ತರಬೇತಿ ಕಾರ್ಯಕ್ರಮದಲ್ಲಿ ತುರ್ತು ಸಂದರ್ಭಗಳಲ್ಲಿ ಸ್ವಯಂಸೇವಕರು ತಕ್ಷಣ ಸ್ಪಂದಿಸುವ ವಿಧಾನ, ಜೀವ ರಕ್ಷಣೆ, ಸಾರ್ವಜನಿಕರ ಸುರಕ್ಷತೆ ಹಾಗೂ ವಿಪತ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಮುಖೇಶ್, ಕ್ಷೇತ್ರ ಯೋಜನಾಧಿಕಾರಿ ರಾಜೇಶ್, ನಿಕಟಪೂರ್ವ ಮಾಸ್ಟರ್ ಮಧುವರನ್, ಕ್ಯಾಪ್ಟನ್ ಪ್ರಸನ್ನಕುಮಾರ್, ಹಾಗೂ “ಶೌರ್ಯ” ಘಟಕದ ಸ್ವಯಂಸೇವಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Spread the love
  • Related Posts

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದ ಜನರ ಕೃಷಿ ಹಾಗೂ ಜೀವನೋಪಾಯಕ್ಕೆ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಆತಂಕವನ್ನು ನಿವಾರಿಸಲು, ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ಪ್ರತ್ಯೇಕಿಸುವಂತೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಅವರು ಮುಖ್ಯಮಂತ್ರಿ ಡಿ.ಕೆ.…

    Spread the love

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಧರ್ಮಸ್ಥಳ: ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ…

    Spread the love

    You Missed

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 3 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 9 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 9 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 16 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 15 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 11 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ