ಗಡಿಯಲ್ಲಿ ಚೀನಾ ಸೇನೆಯು ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ : ಸಿದ್ದರಾಮಯ್ಯ ಸರಣಿ ಟ್ವೀಟ್ ವಾರ್!

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ ಎಲ್ ಸಂತೋಷ್ ಗೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ ಎಂದಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ, ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ನೀವು ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್ಗಿರಿ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು