‘ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ’

ಬೆಂಗಳೂರು: ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ ಎಂದು ಟಾಂಗ್ ನೀಡಿದ್ದಾರೆ.

READ ALSO

ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಇನ್ನೂ ಕೇಂದ್ರ ಸಚಿವ ಸದಾನಂದಗೌಡ ಅವರ ವಿರುದ್ಧ ಹರಿಹಾಯ್ದಿರುವ ಅವರು, ಸದಾನಂದ ಗೌಡ ಅವರೇ, ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು ಕೂಡಾ, ಅದನ್ನೆಲ್ಲ ಮಾಡಲು ಹೋಗಬೇಡಿ.

ಆಡಳಿತ ನಡೆಸುವುದು ನಿಮಗಾಗದ ಕೆಲಸ, ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಟುಬಿಡಿ,‌ ದೇಶಕ್ಕಾಗಿ ಅಷ್ಟು ಮಾಡಿ‌ ಪುಣ್ಯ ಕಟ್ಕೊಳ್ಳಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.