SKDRDP ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿಯವರ 151ನೇ ಜನ್ಮಜಯಂತಿಯ ಆಚರಣೆ ಕಾರ್ಯಕ್ರಮ

ಶಿಡ್ಲಘಟ್ಟ: ದೇಶಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿದ್ದ ಮಹಾತ್ಮ ಗಾಂಧೀಜಿಯವರ 151ನೇ ಜನ್ಮದಿನದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ಸರಳ ಕಾರ್ಯಕ್ರಮವನ್ನು ನಡೆಸಲಾಯಿತು.

151ನೇ ಗಾಂಧಿಜಯಂತಿಯ ಪ್ರಯುಕ್ತ ಗಾಂಧಿಸ್ಮರಣೆಯ ಜೊತೆಗೆ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಕುರಿತು ಯೋಜನಾಧಿಕಾರಿ ಪ್ರಕಾಶ್‌ ಕುಮಾರ್ ಮಾತನಾಡುತ್ತಾ ಸ್ವಾತಂತ್ರ್ಯಕ್ಕೋಸ್ಕರ ಹೋರಾಟ ಮಾಡಿದ ಅದೆಷ್ಟೊ ಮಹಾಪುರುಷರಿದ್ದಾರೆ. ಆದರೆ ಮಹಾತ್ಮ ಅಂತ ಅನಿಸಿಕೊಂಡಿದ್ದು ಗಾಂಧೀಜಿ ಮಾತ್ರ. ಕಾರಣ ಅವರ ತತ್ವಾದರ್ಶಗಳು ಬಾಳಿ ಬದುಕಿದ ರೀತಿ ಸರಳತೆ ಅವರನ್ನು ಇಡೀ ವಿಶ್ವವೇ ಮಹಾತ್ಮ ಅಂತ ಸಂಭೋಧಿಸುವಂತೆ ಮಾಡಿತ್ತು ಎಂದರು.

ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರಾದ ತ್ಯಾಗರಾಜ್ ರವರು ಮಾತನಾಡುತ್ತಾ ಗಾಂಧೀಜಿಯವರು ಜೀವನದಲ್ಲಿ ಸತ್ಯ ಮತ್ತು ಅಹಿಂಸೆಗೆ ಪ್ರಥಮ ಆದ್ಯತೆ ನೀಡಿದ್ದರು ಮತ್ತು ಅದರಂತೆ ಬದುಕಿದರು ಎಂದರು.

ವೆಂಕಟಸ್ವಾಮಿಯವರು ಮಾತನಾಡಿ ಸತ್ಯದ ಅಥವಾ ದೇವರ ಸಾಕ್ಷಾತ್ಕಾರಕ್ಕೆ ಅಹಿಂಸೆಯಲ್ಲದೆ ಅನ್ಯ ಮಾರ್ಗವೇ ಇಲ್ಲ ಎಂಬುದನ್ನು ಮನಗಂಡ ಗಾಂಧೀಜಿಯವರು ಅಹಿಂಸೆಯ ಆಚರಣೆಗೆ ತಮ್ಮ ಬಾಳಿನ ಸರ್ವಸ್ವವನ್ನೂ ಪಣವಾಗಿಟ್ಟರು ಎಂದು ತಿಳಿಸಿದರು. ಸುರೇಶ್ ಹಿತ್ತಲಹಳ್ಳಿಯವರು ಮಾತನಾಡುತ್ತಾ ಧರ್ಮಸ್ಥಳದ ಧರ್ಮಾಧಿಕಾರಿಗಳು ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸು ಮಾಡುತ್ತಿದ್ದಾರೆ.. ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 285 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 47 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 317 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 112 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ