ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಸಾಧ್ಯತೆ!

ಶಿವಮೊಗ್ಗ: ಇತ್ತೀಚೆಗೆ ಬಾರಿ ವಿವಾದಕ್ಕೀಡಾಗಿದ್ದ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆಡಳಿತ ನಿರ್ವಹಣೆ ಮತ್ತು ಇತರ ವಿಧಿ ವಿಧಾನಗಳನ್ನು ನಡೆಸುವುದಕ್ಕೆ ಸಂಬಂಧಪಟ್ಟಂತೆ ಸುಗಮ ಕಾರ್ಯ ನಿರ್ವಹಣೆಗಾಗಿ ಜಿಲ್ಲಾಡಳಿತವು, ಮೇಲ್ವಿಚಾರಣೆ ಮತ್ತು ಸಲಹಾ ಸಮಿತಿ ರಚಿಸಿದೆ.

ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ಸಾಗರದ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ದೇವಸ್ಥಾನದ ಧರ್ಮದರ್ಶಿ ರಾಮಪ್ಪ, ಪ್ರಧಾನ ಅರ್ಚಕ ಶೇಷಗಿರಿ ಭಟ್‌ ಸಮಿತಿಯಲ್ಲಿದ್ದು, ಇದೇ ವೇಳೆ ಸರ್ಕಾರಕ್ಕೆ ಜಿಲ್ಲಾಡಳಿತ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಯನ್ನು ನೀಡಿದೆ.

READ ALSO

ದೇವಾಲಯವು ಇರುವ ಜಾಗವು ಸರ್ಕಾರದ ಜಾಗದಲ್ಲಿ ಇದ್ದು, ಈ ಜಾಗ ಒತ್ತುವರಿಯಾಗಿದೆ ಎನ್ನಲಾಗಿದೆ. ಇವೆಲ್ಲದರ ನಡುವೆ ರಾಜ್ಯ ಸರ್ಕಾರ ವಿವಾದತ್ಮಕ ಸಿಂಗದೂರು ದೇವಾಲಯವನ್ನು ‘ ಮುಜರಾಯಿ ಇಲಾಖೆಗೆ ಸೇರಿಸಲು ಮುಂದಾಗಲಿದೆ ಎನ್ನಲಾಗುತ್ತಿದ್ದು, ಮುಂಬರುವ ದಿನದಲ್ಲಿ ಈ ಬಗ್ಗೆ ಸರಿಯಾದ ಚಿತ್ರಣ ಕಂಡು ಬರಲಿದೆ.