ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡುವ ಮೂಲಕ ಯುವ ಸಮೂಹವನ್ನು ಜಾಗೃತಗೊಳಿಸುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುತ್ತಿರುವುದು ಶ್ಲಾಘನೀಯ

ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಇದರ ಜಿಲ್ಲಾ ಮಟ್ಟದ ಗಾಂಧೀ ಸ್ಮೃತಿ ಮತ್ತು ಪಾನಮುಕ್ತ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ವನ್ನು ಶಿರಾ ತಾಲೂಕಿನ ಶ್ರೀ ಕನ್ನಿಕಾ ಪರಮೇಶ್ವರಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದು ಜಿಲ್ಲಾ ಕಚೇರಿಯಿಂದ ಕನ್ನಿಕಾ ಪರಮೇಶ್ವರಿ ದೇವಸ್ಥಾನದವರೆಗೆ ಜಾಥಾ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಶ್ರೀ ಕಾರದೇಶ್ವರ ಮಠದ ಶ್ರೀ ಶಾರದಾ ವೀರ ಬಸವ ಮಹಾಸ್ವಾಮಿಗಳು ಮಾತನಾಡುತ್ತಾ ಮಧ್ಯಪಾನ ನಮ್ಮ ಸಮಾಜಕ್ಕೆ ಅನೇಕ ಹಾನಿಗಳನ್ನು ಉಂಟು ಮಾಡುತ್ತಿದೆ. ಇದರ ಪರಿಣಾಮವಾಗಿ ಆರೋಗ್ಯ ಹಾನಿ, ಕುಟುಂಬ ಕಲಹ, ಆರ್ಥಿಕ ಹಾನಿ, ಅಪರಾಧಗಳು, ಅಪಘಾತಗಳು, ಸಾಮಾಜಿಕ ಅಶಾಂತಿ ಮುಂತಾದ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಇಂತಹ ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಶ್ರಮಿಸುತ್ತಿರುವುದು ಲೋಕ ಕಲ್ಯಾಣ ಕಾರ್ಯವಾಗಿದೆ ಯುವ ಜನತೆ ಇಂದಿನ ದಿನಗಳಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಹಾಗೂ ಮೊಬೈಲ್ ಗೀಳಿಗೆ ಹಾಳಾಗುತ್ತಿದೆ. ಯುವ ಜನತೆಯ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ದೇಶದ ಆರ್ಥಿಕತೆಗೆ ಭಾರಿ ಪೆಟ್ಟನ್ನು ನೀಡುತ್ತದೆ. ಜನಜಾಗೃತಿ ಸಂಘಗಳು ಯುವಕರಿಗೆ ಜಾಗೃತಿ ಮೂಡಿಸಲಿ ಎಂದರು.

ತುಮುಲ್ ನಿರ್ದೇಶಕ ಎಸ್.ಆರ್. ಗೌಡ ಮಾತನಾಡಿ ಕುಡಿತ ಕುಡುಕನ ದೇಹವನ್ನು ಅಷ್ಟೇ ಹಾಳು ಮಾಡುವುದಿಲ್ಲ ಇಡೀ ಕುಟುಂಬವನ್ನೇ ನಿರ್ನಾಮ ಮಾಡುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಯುವ ಜನತೆ ಮಧ್ಯವಸನಿಗಳಾಗಿರಬಾರದು ಎಂಬುದು ಮಹಾತ್ಮ ಗಾಂಧಿ ಆಶಯ, ಅದರಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಘ ರಾಜ್ಯದ್ಯಂತ ಮಧ್ಯವರ್ಜನ ಶಿಬಿರಗಳನ್ನು ಆಯೋಜಿಸಿ ಮಧ್ಯಪಾನ ಮುಕ್ತರನ್ನಾಗಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಂಜುನಾಥ್ ಲಾಲಪೇಟೆಯವರು ಮಾತನಾಡಿ ಜನಜಾಗೃತಿ ಕಾರ್ಯಕ್ರಮದ ಮೂಲಕ ಸಾಮಾಜಿಕ ಪಿಡುಗುಗಳಾದ ಮಧ್ಯಪಾನ ಮಾದಕ ಸೇವನೆಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಯುವಜನತೆಯನ್ನು ವ್ಯಸನದಿಂದ ಮುಕ್ತ ರನ್ನಾಗಿ ಮಾಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಕಟಪೂರ್ವ ಅಧ್ಯಕ್ಷರಾದ ಎಸ್ ಕೆ ರಾಮಚಂದ್ರ ಗುಪ್ತ ಮಾತನಾಡಿ ಸರ್ಕಾರದ ಮಟ್ಟದಲ್ಲಿ ಮದ್ಯ ಮಾರಾಟದ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ,ಜನಜಾಗೃತಿ ಕಾರ್ಯಕ್ರಮಗಳು. ಮದ್ಯಪಾನಕ್ಕೆ ಪರ್ಯಾಯ ಮನರಂಜನಾ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಪ್ರೋತ್ಸಾಹ.ಸಮಾಜದ ಮಟ್ಟದಲ್ಲಿ
ಸ್ವಯಂಸೇವಾ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು.ಶಾಲೆ, ಕಾಲೇಜು, ಗ್ರಾಮ, ನಗರಗಳಲ್ಲಿ ಅಭಿಯಾನಗಳು ನಡೆಸುವುದು.ಮದ್ಯಪಾನವನ್ನು ವಿರೋಧಿಸುವ ಸಾಮಾಜಿಕ ಚಳವಳಿಗಳನ್ನು ಪ್ರೋತ್ಸಾಹಿಸುವುದರ ಮೂಲಕ ಮಧ್ಯಪಾನ ತಡೆಗಟ್ಟಬಹುದು ಎಂದರು.ಈ ಸಂದರ್ಭದಲ್ಲಿ ಪೋಲಿಸ್ ಉಪ ಅಧೀಕ್ಷಕರಾದ ಶ್ರೀ ಶೇಖರ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯರ ಜನಪರ ಕಾರ್ಯಕ್ರಮಗಳನ್ನು ಶ್ಲಾಘಿಸಿ ಯುವಜನತೆ ಉತ್ತಮ ಚಟುವಟಿಕೆಗಳಲ್ಲಿ ಸ್ವ ಉದ್ಯೋಗದಲ್ಲಿ ತಮ್ಭನ್ನು ತಾವು ತೊಡಗಿಸಿಕೊಂಡು ದುಶ್ಚಟಗಳಿಂದ ದೂರವಿದ್ದು ದೇಶದ ಸತ್ಪ್ರಜೆಗಳಾಗಿ ಬಾಳಬೇಕೆಂದು ತಿಳಿಸಿದರು, ಬೆಂಗಳೂರು ಪ್ರಾದೇಶಿಕ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಎಲ್ಲರನ್ನೂ ಸ್ವಾಗತಿಸಿದರು, ಯೋಜನಾಧಿಕಾರಿ ದಿನೇಶ್ ಕುಮಾರ್ ಹಾಗೂ ಶಶಿಧರ್ ಕಾರ್ಯಕ್ರಮ ನಿರೂಪಿಸಿದರು, ಜಿಲ್ಲಾ ಜನಜಾಗೃತಿ ವೇಿಕೆ ಸದಸ್ಯರುಗಳಾದ ನಾಗರಾಜು, ಬಿಕೆ ಲಕ್ಷ್ಮಣ್ ಗೌಡ ,ಬೋರಸಂದ್ರ ಬಸವರಾಜು, ಸಾಯಿ ದರ್ಶನ್ ,ಲತಾ ಪ್ರದೀಪ್ ರಾಜಣ್ಣ , ರಾಜೇಶ್ವರಿ , ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಯೋಜನಾಧಿಕಾರಿಗಳಾದ ಸದಾಶಿವ ಗೌಡ ಹಾಗೂ ರಮೇಶ್ ಎನ್, ಜಿಲ್ಲೆಯ ನವಜೀವನ ಸಮಿತಿ ಸದಸ್ಯರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ