ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

ಧರ್ಮಸ್ಥಳ: ಗ್ರಾ ಮೀಣ ಪ್ರದೇಶದ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ನಿರ್ಮಾಣಗೊಂಡಿ ರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ ಉದ್ಘಾಟನಾ ಸಮಾರಂಭ ಮೇ 31ರಂದು ಬೆಳಗ್ಗೆ 10 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ನ್ನು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಉದ್ಘಾಟಿಸುವರು. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಸಿರಿ ಸಂಸ್ಥೆಯ ಅಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾ‌ರ್, ರಾಜ್ಯಸಭೆ ಕಾರ್ಯದರ್ಶಿ ಡಾ.ಕೆ.ಎಸ್.ಸೋಮ ಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸ್ವಾವಲಂಬಿ ಬದುಕಿಗೆ ಶಕ್ತಿ ನೀಡಿದ ಸಿರಿ ಗ್ರಾಮೋದ್ಯೋಗ ಸಂಸ್ಥೆ:

ಧರ್ಮಸ್ಥಳಸಿರಿ ಗ್ರಾಮೋದ್ಯೋಗ ಸಂಸ್ಥೆಯು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆ ಅವರ ಕನಸಿನ ಕೂಸು. ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸ್ಥಾಪನೆಗೊಂಡ ಈ ಸಂಸ್ಥೆ ಇಂದು ಅಕ್ಷರಶಃ ಉದ್ಯೋಗ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದೆ. ಐದು ಸಾವಿರಕ್ಕೂ ಹೆಚ್ಚು ಕುಟುಂಬಗಳ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಬೆಳ್ತಂಗಡಿ ಮತ್ತು ಸುತ್ತಮುತ್ತಲ ಊರಿನ ಮಹಿಳೆಯರು ಇಂದು ಭರವಸೆಯ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಿರಿ ಉತ್ಪನ್ನಗಳು ಇಂದು ರಾಜ್ಯವ್ಯಾಪಿ ಜನಪ್ರಿಯವಾಗಿವೆ.ಆಕರ್ಷಕ ಬೆಲೆ ಮತ್ತು ಗುಣಮಟ್ಟದ ಉತ್ಪನ್ನಗಳಿಂದ ಗ್ರಾಹಕರ ವಿಶ್ವಾಸ ಗಳಿಸಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಪ್ರದೇಶದಲ್ಲಿ 2004ರಲ್ಲಿ ಸ್ಥಾಪನೆಯಾದ ಸಿರಿ ಸಂಸ್ಥೆ ವಿಶೇಷ ಸ್ಥಾನ ಪಡೆದಿದೆ. ವಿಶೇಷ ಅನುಭವ, ಪರಿಣತಿ ಇಲ್ಲದ ಗ್ರಾಮೀಣ ಮಹಿಳೆಯರಿಗೆ ವೇತನ ಸಹಿತವಾಗಿ ತರಬೇತಿ ನೀಡಿ ಅವರಿಂದ ಉತ್ತಮ ಗುಣಮಟ್ಟದ ಸಿದ್ದ ಉಡುಪು ಉತ್ಪನ್ನ, ಫಿನಾಯಿಲ್, ಅಗರಬತ್ತಿ, ಜೂಸ್, ಉಪ್ಪಿನಕಾಯಿ ಸಹಿತ ಹಲವು ಬಗೆಯ ಗೃಹೋಪಯೋಗಿ ಉತ್ಪನ್ನಗಳನ್ನು ತಯಾರಿಸುತ್ತಿದೆ.

ಸಿರಿಯ ಉತ್ಪನ್ನಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಬಳಿ 7 ಎಕ್ರೆ ನಿವೇಶನದಲ್ಲಿ 1.50 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ, ಬೃಹತ್ ಕಟ್ಟಡ ನಿರ್ಮಿಸಿ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಸಲಾಗಿದೆ.

ಸಿರಿ ಸಂಸ್ಥೆಯ ಕೆಲಸಕ್ಕೆ ಆಗಮಿಸುವ ಸಿಬ್ಬಂದಿಗೆ ಎರಡು ಉಚಿತ ಬಸ್ ವ್ಯವಸ್ಥೆ ಇದೆ. ದೂರದ ಊರಿನ ಮಹಿಳೆಯರಿಗಾಗಿ ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ ಇದೆ. 11 ವಸತಿ ಗೃಹಗಳು, ಜಿಮ್ ಇಕ್ಯುಪ್‌ಮೆಂಟ್, ಮೆಡಿಟೇಷನ್, ಕೊಠಡಿ ಸೌಲಭ್ಯ ಇದೆ. ಸಂಸ್ಥೆಯಲ್ಲಿ ಶೇ.90 ಮಹಿಳಾ ಸಿಬ್ಬಂದಿ ಇದ್ದು, ಪುಟ್ಟ ಮಕ್ಕಳ ಪಾಲನೆಗೆ ಸಂಸ್ಥೆಯಲ್ಲಿ ಶಿಶು ವಿಹಾರ ಕೇಂದ್ರ ಇದೆ. ಸಂಸ್ಥೆಯ ಪ್ರವೇಶ ದ್ವಾರದ ಬಳಿ ಸಿರಿ ಉತ್ಪನ್ನಗಳ ಮಾರಾಟ ಮಳಿಗೆ ಸಿರಿ ಕೆಫೆ ತೆರೆಯಲಾಗಿದೆ.

Spread the love
  • Related Posts

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ…

    Spread the love

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 3 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ