ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಿಳೆಯ ನೆರವಿಗೆ ನಿಂತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಶಿಡ್ಲಘಟ್ಟ ಇದರ ವತಿಯಿಂದ
ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳುಟ್ಟಿ ಯ ಲಕ್ಷ್ಮಮ್ಮ ರವರಿಗೆ ಸಹಾಯಧನ ಹಸ್ತಾಂತರಿಸಲಾಯಿತು.

ದಾನ ಧರ್ಮಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು 25000 ಸಹಾಯಧನ ಮೊತ್ತವನ್ನು ಮಂಜೂರುಗೊಳಿಸಿದ್ದು ಲಕ್ಷ್ಮಮ್ಮ ರವರ ಆರೋಗ್ಯದ ತುರ್ತು ಚಿಕಿತ್ಸೆಗಾಗಿ ವಿತರಿಸಲಾಯಿತು.

READ ALSO

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕ್ರಷಿಕರಾದ ಸುರೇಶ್ ರವರು ಸಹಾಯಧನ ಮೊತ್ತವನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ. ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮತ್ತು ಮೇಲ್ವಿಚಾರಕಿ ಜ್ಯೋತಿ ಸೇವಾಪ್ರತಿನಿಧಿ ವೆಂಕಟಲಕ್ಷ್ಮಿ ಒಕ್ಕೂಟದ ಅಧ್ಯಕ್ಷರಾದ ನಳಿನಾರವರು ಉಪಸ್ಥಿತರಿದ್ದರು.