“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ವತಿಯಿಂದ ಹೆಗ್ಗದ್ದೆ ಹಾಗೂ ಕಸಬಾ, ಹೆಬಸ್ಸಾಲೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆರ್ಥಿಕ ಸಾಮಾಜಿಕ, ಹಾಗೂ ಮಹಿಳಾ ಸಬಲೀಕರಣದೊಂದಿಗೆ ಸಂಘಟಿತವಾಗಿ ಅಭಿವೃದ್ಧಿ ಪಡಿಸುವಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರದ ಸಾಧನೆ ಮಾಡಿದೆ ಇದರಲ್ಲಿ ಒಕ್ಕೂಟಗಳನ್ನು ರಚಿಸಿಕೊಂಡಿದ್ದು ಒಕ್ಕೂಟದ ಪದಾಧಿಕಾರಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸಬೇಕು, ಪದಾಧಿಕಾರಿಗಳು ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸುವುದು, ಸಂಘಟನೆಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಹಾಗೂ ಸದಸ್ಯರಲ್ಲಿ ಒಗ್ಗಟ್ಟು ಮತ್ತು ಸಹಕಾರದ ಮನೋಭಾವ ಬೆಳೆಸುವುದು ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ, ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಹಾಗೂ ಯೋಜನೆಯ ಮೂಲ ತತ್ವಗಳ ಕುರಿತು ವಿವರಿಸಿದರು. ಗ್ರಾಮೀಣ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಯೋಜನೆಯ ಪಾತ್ರ, ಸ್ವಾವಲಂಬನೆ ಹಾಗೂ ಸಂಘಟಿತ ಪ್ರಯತ್ನಗಳ ಮಹತ್ವವನ್ನು ತಿಳಿಸಿದರು.

ಒಕ್ಕೂಟದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಮೂಲಕ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ತರಬೇತಿಯಲ್ಲಿ ಸಮುದಾಯ ಕಾರ್ಯಕ್ರಮಗಳ ಉದ್ದೇಶ, ಅನುಷ್ಠಾನ ವಿಧಾನ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನೆಯ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ರಾಜೇಶ್ ಎಂ, ಜಿಲ್ಲಾ ವಿಚಕ್ಷಣಾಧಿಕಾರಿ ಅರುಣ್, ವಿಮಾ ಸಮನ್ವಯಾಧಿಕಾರಿ ಶಿವಕುಮಾರ್, ಹಾಗೂ ಯೋಜನೆಯ ಸಿಬ್ಬಂದಿಗಳಾದ ಚಿರಂತ್, ಮೋಹಿನಿ, ಪರಮೇಶ್ ,ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 4 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 12 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು