ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಇಂದು ದೇಶದಲ್ಲಿ ಕೃಷಿ ಕ್ಷೇತ್ರದ ಕ್ರಾಂತಿಯಾಗಿದೆ. ದೇಶದ ಜನರಿಗೆ ಸಾಕಾಗುವಷ್ಟು ಅಕ್ಕಿ, ದವಸ ಧಾನ್ಯ ಉತ್ಪಾದನೆಯಾಗುತ್ತಿದೆ. ರೈತರು ಸಶಕ್ತರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದರು. ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲ ಪಡೆದು ಲಾಭಾಂಶವನ್ನು ಸ್ವೀಕರಿಸಿರುವ ಎಲ್ಲರಿಗೂ ವಂದನೆಗಳು. ಇಂಥ ಕಾರ್ಯಕ್ರಮಗಳಿಂದ ಇಂದು ಮಹಿಳೆಯರು ಸ್ವಯಂ ಗೌರವದಿಂದ ನಾವೂ ದುಡಿಯುತ್ತಿದ್ದೇವೆ ಎಂದು ಹೇಳಬಹುದಾಗಿದೆ. ನೀವು ಕೊಡುವ ಹಣ ಲಾಭದ ರೂಪದಲ್ಲಿ ಗೌರವಪೂರ್ವಕವಾಗಿ ನಿಮಗೆ ವಾಪಾಸ್ ಬಂದಿದೆ. ಗ್ರಾಮೀಣ ಅಭಿವೃದ್ಧಿಗೆ ಜನರ ಹಣ ಬಳಕೆಯಾಗುತ್ತಿದೆ. ಕೋವಿಡ್ ಸಮಯದಲ್ಲಿ ಆತ್ಮನಿರ್ಭರ್ ಭಾರತ್ ಘೋಷಣೆ ಮಾಡಿದ ಬಳಿಕ 5 ಮಿನಿ ಬಜೆಟ್‌ಗಳನ್ನು ರಾಷ್ಟ್ರಕ್ಕೆ ಅರ್ಪಿಸಿದ್ದೇವೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಕೂಡ ಇದೇ ಆಗಿದೆ. ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಎಂಬುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೇ ಉತ್ತಮ ಉದಾಹರಣೆಯಾಗಿದೆ. ಧರ್ಮಸ್ಥಳ ಇದು ಗ್ರಾಮೀಣ ಯೋಜನೆಯ ಪ್ರಯೋಗಾಲಯ ಎಂದರೆ ತಪ್ಪಾಗದು ಎಂದು ಯೋಜನೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಬಳಿಕ ಮಾತಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು, ನಿರ್ಮಲಾ ಸೀತಾರಾಮನ್ ಅವರು ದೇಶದ ಆರ್ಥಿಕ ಮಂತ್ರಿಯಾದರೆ ನಾವು ನಮ್ಮ ಸಂಘದ ಮಹಿಳೆಯರನ್ನು ಆರ್ಥಿಕ ಮಂತ್ರಿಯನ್ನಾಗಿ ಮಾಡಿದ್ದೇವೆ. ಯೋಜನೆಯಲ್ಲಿ 62% ಮಹಿಳೆಯರು ಇದ್ದರೆ 38% ಮಂದಿ ಪುರುಷರು ಇದ್ದಾರೆ. ಮಹಿಳೆಯರನ್ನು ಮಾತ್ರವಲ್ಲದೆ ಗಂಡಸರನ್ನು ನಂಬಿ ಸಾಲ ಕೊಟ್ಟವರು ನಾವು. ಎಲ್ಲ ಸಂಘಗಳು ಶಿಸ್ತುಬದ್ಧವಾಗಿ ಕೆಲಸ ಮಾಡಿದರೆ ಏನು ಪ್ರಯೋಜನವಾಗುತ್ತದೆ ಅನ್ನುವುದಕ್ಕೆ ಲಾಭಾಂಶ ವಿತರಣೆ ಕಾರ್ಯಕ್ರಮ ಸಾಕ್ಷಿ. ಬ್ಯಾಂಕ್ ನಿಮ್ಮನ್ನು ನಂಬಿ ನಮಗೆ ಸಾಲ ಕೊಟ್ಟಿದೆ. ನಾವು ನಿಮ್ಮನ್ನು ನಂಬಿ ಸಾಲ ಕೊಟ್ಟಿದ್ದೇವೆ. ಹೆಣ್ಮಕ್ಕಳ ಕೈಗೆ ಹಣ ಕೊಟ್ಟಲ್ಲಿ ಹಣದ ಸರಿಯಾದ ಬಳಕೆಯಾಗುತ್ತದೆ. ನೀವು ಗೃಹಲಕ್ಷ್ಮಿಯಾಗಿದ್ದೀರಿ. ನಿಮ್ಮಿಂದ ಸಂಸ್ಥೆಗೆ ಕೀರ್ತಿ ಬಂದಿದೆ ಎಂದರು.

ಬಳಿಕ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಣೆ ಮಾಡಲಾಯಿತು.

ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ ಕೆ.ವಿ. ಮಾತನಾಡಿ, 1992ರಲ್ಲಿ ನಬಾರ್ಡ್ ಪ್ರಾರಂಭಗೊಂಡಿದ್ದು, ಅಂದಿನಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜೊತೆಗೂಡಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದೆ. ಈಗ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿ ನಡೆಯುತ್ತಿರುವುದು ಖುಷಿಯ ವಿಚಾರ. ಸಣ್ಣ ಮಧ್ಯಮ ಉದ್ಯಮಗಳಿಗೆ ಸ್ವ-ಸಹಾಯ ಸಂಘಗಳು ಬೆಂಬಲ ನೀಡುತ್ತಿರುವ ಕಾರಣ ಗ್ರಾಮೀಣ ಮಟ್ಟದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. 600 ಕೋಟಿಯಷ್ಟು ದೊಡ್ಡ ಮೊತ್ತ ಲಾಭವನ್ನು ಸ್ವ-ಸಹಾಯ ಸಂಘದ ಸದಸ್ಯರಿಗೆ ಹಂಚುವ ಸಂಘದ ಕ್ರಮ ಶ್ಲಾಘನೀಯವಾದುದು ಎಂದರು.

ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಶಾಂತಾರಾಮ್ ಆರ್. ಪೈ, ಪ್ರವೀಣ್ ಎಂ.ಸಿ. ಕಾರ್ಯಕ್ರಮ ನಿರೂಪಿಸಿದರು. ಆನಂದ ಸುವರ್ಣ ಧನ್ಯವಾದ ಸಮರ್ಪಿಸಿದರು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 4 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 2 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ