Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ ಜಿಲ್ಲೆಯ ವಿವಿಧ ತಾಲೂಕುಗಳ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಡಾ.ಹೇಮಾವತಿ ವಿ.ಹೆಗ್ಗಡೆ, ಡಿ.ಸುರೇಂದ್ರಕುಮಾರ್, ಶ್ರದ್ಧಾ ಅಮಿತ್ ,ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಇದುವರೆಗೆ ರಾಜ್ಯಾದ್ಯಂತ 11,621 ಗ್ರಾಮೀಣ ಶಾಲೆಗಳಿಗೆ 75,518 ಜೊತೆ ಬೆಂಚ್ ಡೆಸ್ಕ್ ಒದಗಿಸಿದ್ದು ಇದಕ್ಕಾಗಿ 28.55ಕೋಟಿ ಅನುದಾನ ಮೊತ್ತವನ್ನು ವಿನಿಯೋಗಿಸಲಾಗಿದೆ.




