
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಮಾವೇಶವನ್ನು ನಡೆಸುವುದಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಗಿರೀಶ್ ಮಂಜುನಾಥ್ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.