ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ( S M Krishna ) ಅವರು ತಡರಾತ್ರಿ ವಿಧಿವಶರಾಗಿದ್ದಾರೆ.ಎಸ್.ಎಂ. ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಅವರು ಇತ್ತೀಚಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಚೇತರಿಸಿಕೊಳ್ಳದ ಹಿನ್ನೆಲೆ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.

ಕೃಷ್ಣ ಅವರು 1999 ರಿಂದ 2004 ರವರೆಗೆ ಕರ್ನಾಟಕದ 10ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜಕೀಯ ಜೀವನದಲ್ಲಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 2023ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಯಿತು.ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. 1932, ಮೇ 1ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ ಒಕ್ಕಲಿಗ ಕುಟುಂಬದಲ್ಲಿ ಜನಿಸಿದರು. ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢಶಾಲೆ ಮುಗಿಸಿದರು. ಬಳಿಕ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪೂರ್ಣಗೊಳಿಸಿದರು ಮತ್ತು ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದರು. ಇದಾದ ನಂತರ ಕೃಷ್ಣ ಅವರು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಅಧ್ಯಯನ ಮಾಡಿದರು.ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್‌ಟನ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಪದವಿ ಪಡೆದರು. ಭಾರತಕ್ಕೆ ಮರಳಿದ ನಂತರ 1962 ರಲ್ಲಿ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು.ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್ ತಿಂಗಳಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ