ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ

ಚಾರ್ಮಾಡಿ : ಚಾರ್ಮಾಡಿಯ ಕಣ್ಣಪ್ಪಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮತ್ತು ತರಕಾರಿ ಗಿಡಗಳ ಬೀಜದುಂಡೆಗಳನ್ನು ಹಾಕುವ ಮೂಲಕ ‘ಸಾಮಾಜಿಕ ಅರಣ್ಯೀಕರಣ’ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

ಚಾರ್ಮಾಡಿಯ ಕನಪ್ಪಾಡಿ ಮೀಸಲು ಅರಣ್ಯ ಪ್ರದೇಶದ ಸುಮಾರು 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಗಿಡಗಳ ಬಿತ್ತನೆ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿತು. ಮಾವು, ಹಲಸು, ಹೆಬ್ಬಲಸು, ನೇರಳೆ, ಕಾನಾಜೆ ಸೇರಿದಂತೆ ಹಲವು ಬೀಜಗಳನ್ನು ಸಂಗ್ರಹಿಸಿ ಅವುಗಳನ್ನು ಬೀಜದುಂಡೆಗಳಾಗಿ ಪರಿವರ್ತಿಸಿ ಭೂಮಿಗಿಳಿಸಲಾಯಿತು.

ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳಿಗೆ ಕಾಡಿನಲ್ಲೇ ಆಹಾರ ದೊರಕಬೇಕೆನ್ನುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಇತ್ತೀಚೆಗೆ ಅರಣ್ಯ ಸಚಿವರಿಂದ ‘ಸಾಮಾಜಿಕ ಅರಣ್ಯೀಕರಣ ’ ಯೋಜನೆಗೆ ಚಾಲನೆ ನೀಡಲಾಗಿತ್ತು. ಬಯಲು ಪ್ರದೇಶ ಮತ್ತು ಖಾಲಿ ಜಾಗಗಳಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಮತ್ತು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಬೀಜಗಳನ್ನು ಎಸೆಯುವ ಮೂಲಕ ಅರಣ್ಯದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಹೆಗ್ಗಡೆಯವರ ಪುತ್ರಿ ಶ್ರದ್ಧಾ ಅಮಿತ್ ,ಸುರೇಂದ್ರ ಕುಮಾರ್ ಅವರ ಮಗಳು ಶ್ರುತಾ ಜಿತೇಶ್, ಶ್ರೀ.ಕ್ಷೇ. ಧ. ಗ್ರಾ. ಯೋಜನೆಯ ಮುಖ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಾಸ್, ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ಜೈವಂತ್ ಪಟಗಾರ್, ತಾಲೂಕು ಯೋಜನಾಧಿಕಾರಿ ಜಯಕರ್ ಶೆಟ್ಟಿ, ಚಾರ್ಮಾಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ಚಾರ್ಮಾಡಿ ಚಾರ್ಮಾಡಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಾಗಿ, ಅರಣ್ಯ ರಕ್ಷಕ ಶರತ್ ಶೆಟ್ಟಿ, ವೀರು ಶೆಟ್ಟಿ ಧರ್ಮಸ್ಥಳ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿಯ ಸದಸ್ಯರು, ಚಾರ್ಮಾಡಿ ಪೆಂಟ್ರೋಲ್ ಬಂಕ್ ಮಾಲಕ ಅನಂತ ಭಟ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗಿಗಳಾದರು.

ವರದಿ : ಸ್ವಸ್ತಿಕ್ ಕನ್ಯಾಡಿ

Spread the love
 • Related Posts

  ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದರೆ ಕರ್ನಾಟಕದಿಂದ ಆಯ್ಕೆಯಾದ ಎನ್‌ಡಿಎ ಸಂಸದರ ಪೈಕಿ ಹೆಚ್‌ಡಿ ಕುಮಾರಸ್ವಾಮಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ…

  Spread the love

  ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಮೇಲೆ ಭಯೋತ್ಪಾದಕರು ಭಾನುವಾರ ದಾಳಿ ನಡೆಸಿದ್ದಾರೆ. ಈ ಘಟನೆಯ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ. ಆರಂಭಿಕ ವರದಿಗಳನ್ನು ಉಲ್ಲೇಖಿಸಿ, ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ…

  Spread the love

  Leave a Reply

  Your email address will not be published. Required fields are marked *

  You Missed

  ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  • By admin
  • June 9, 2024
  • 4 views
  ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ

  • By admin
  • June 9, 2024
  • 5 views
  ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ

  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  • By admin
  • May 26, 2024
  • 7 views
  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  • By admin
  • May 25, 2024
  • 9 views
  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

  • By admin
  • May 22, 2024
  • 10 views
  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

  ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ

  • By admin
  • May 22, 2024
  • 11 views
  ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ