ತುರ್ತು ಭೂ ಸ್ಪರ್ಶದ ವೇಳೆ ರನ್ ವೇ ಯಿಂದ ಜಾರಿ ಜೆಜು ಏರ್‌ನ ಬೋಯಿಂಗ್ 737-800 ಪತನ 179 ಮಂದಿ ದುರ್ಮರಣ

ದಕ್ಷಿಣ ಕೊರಿಯಾದಲ್ಲಿ ವಿಮಾನವೊಂದು ಪತನಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿತ್ತು. ದಕ್ಷಿಣ ಕೊರಿಯಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇಯಿಂದ ಜಾರಿದ ನಂತರ ವಿಮಾನವೊಂದು ಬೆಂಕಿಗೆ ಆಹುತಿಯಾಗಿ 179 ಜನರು ಸಾವನ್ನಪ್ಪಿದ್ದಾರೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜೆಜು ಏರ್ ವಿಮಾನ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಾಗ ರನ್ ವೇಯಿಂದ ಜಾರಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೀಡಾದ ವಿಮಾನವು ಜೆಜು ಏರ್‌ನ ಬೋಯಿಂಗ್ 737-800 ಎಂದು ವರದಿಯಾಗಿದೆ. 175 ಪ್ರಯಾಣಿಕರು ಮತ್ತು 6 ಫ್ಲೈಟ್ ಅಟೆಂಡೆಂಟ್‌ಗಳನ್ನು ಹೊತ್ತ ಜೆಜು ಏರ್ ವಿಮಾನವು ಥಾಯ್ಲೆಂಡ್‌ನಿಂದ ಹಿಂತಿರುಗುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ಪತನಗೊಂಡಿದೆ.

ದಕ್ಷಿಣ ಕೊರಿಯಾದ ಸುದ್ದಿ ಸಂಸ್ಥೆ ಯೋನ್ಹಾಪ್ ವರದಿಯ ಪ್ರಕಾರ, ಪಕ್ಷಿಗಳ ಡಿಕ್ಕಿಯಿಂದಾಗಿ ವಿಮಾನದ ಲ್ಯಾಂಡಿಂಗ್ ಪರಿಣಾಮ ಬೀರಿರಬಹುದು. ಇದರಿಂದಾಗಿ ಲ್ಯಾಂಡಿಂಗ್ ಗೇರ್ ಒಡೆದು ಬೆಂಕಿ ಹೊತ್ತಿಕೊಂಡಿದೆ. ಯೋನ್ಹಾಪ್ ವರದಿಯ ಪ್ರಕಾರ, ಲ್ಯಾಂಡಿಂಗ್ ಗೇರ್ ವಿಫಲವಾದ ನಂತರ ಪೈಲಟ್ ನೇರವಾಗಿ ವಿಮಾನವನ್ನು ಇಳಿಸಲು ನಿರ್ಧರಿಸಿದರು. ತುರ್ತು ಭೂಸ್ಪರ್ಶದ ವೇಳೆ ವಿಮಾನದ ವೇಗವನ್ನು ಕಡಿಮೆ ಮಾಡಲು ಸಾಧ್ಯವಾಗದೆ ರನ್ ವೇಯ ತುದಿಯನ್ನು ತಲುಪಿತ್ತು. ವಿಮಾನ ನಿಲ್ದಾಣದ ಕೊನೆಯಲ್ಲಿ ಬೇಲಿಗೆ ಅಪ್ಪಳಿಸಿ ವಿಮಾನವು ಬೆಂಕಿ ಹೊತ್ತಿಕೊಂಡಿತು.

ಮಾಹಿತಿಯ ಪ್ರಕಾರ, 175 ಪ್ರಯಾಣಿಕರಲ್ಲಿ 173 ಮಂದಿ ಕೊರಿಯನ್ ಪ್ರಜೆಗಳು. 2 ಥಾಯ್ ಪ್ರಜೆಗಳಿದ್ದರು.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ