ಡಿಜಿಟಲ್ ಡೆಸ್ಕ್: ರಷ್ಯಾದ ಗಮಾಲೆಯಾ ರಾಷ್ಟ್ರೀಯ ಸಾಂಕ್ರಾಮಿಕ ರೋಗ ಶಾಸ್ತ್ರ ಮತ್ತು ಸೂಕ್ಷ್ಮಜೀವಶಾಸ್ತ್ರ ಕೇಂದ್ರವು ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ (ಕೋವಿಡ್-19) ಲಸಿಕೆಯಾದ ಸ್ಪುಟ್ನಿಕ್-ವಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ನಂತರ ಭಾರತವು ಅನುಮೋದಿಸಿದ ಮೂರನೇ ಲಸಿಕೆ ಇದಾಗಿದೆ.
ಈ ನಡುವೆ ದೇಶದಲ್ಲಿ ಸತತವಾಗಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ . ಕಳೆದ 24 ಗಂಟೆಯಲ್ಲಿ 1.68 ಲಕ್ಷ ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ .
Subject Expert Committee approves Dr Reddy's application for emergency use authorisation to Sputnik V: Sources#COVID19 pic.twitter.com/U2wsCQTNY0
— ANI (@ANI) April 12, 2021
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,68,912 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 904 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
ಮಹಾರಾಷ್ಟ್ರ, ಛತ್ತೀಸ್ ಗಢ, ಉತ್ತರ ಪ್ರದೇಶ, ಕರ್ನಾಟಕ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ರಾಜಸ್ಥಾನ, ಪಂಜಾಬ್, ಕೇರಳ, ತೆಲಂಗಾಣ, ಉತ್ತರಾಖಂಡ್, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಒಂದೇ ದಿನದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
