ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಜಿರೆ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ

ಅರಸಿನಮಕ್ಕಿ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಜಿರೆ ಇದರ ಅರಸಿನಮಕ್ಕಿ ನೂತನ ಶಾಖೆಯ ಉದ್ಘಾಟನಾ ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಿದ್ದರು.

READ ALSO

ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಗಂಗಾಧರ ಗೌಡ ನಿರಖು ಠೇವಣಿ ಪತ್ರ ವಿತರಿಸಿದರು.ಸ್ವಸಹಾಯ ಸಂಘದ ಪುಸ್ತಕ ವಿತರಣೆಯನ್ನು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ನೆರವೇರಿಸಿದರು.

ಭದ್ರತಾ ಕೊಠಡಿ ಉದ್ಘಾಟನೆಯನ್ನು ವಾಣಿ ಸೌಹಾರ್ದ ಕೋ.ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆಚ್.ಪದ್ಮ ಗೌಡ ನೆರವೇರಿಸಿದರು. ಗಣಕಯಂತ್ರ ಉದ್ಘಾಟನೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ನೆರವೇರಿಸಿದರು. ಪ್ರಥಮ ಸಾಲಪತ್ರವನ್ನು ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ವಿತರಿಸಿದರು. ಉಳಿತಾಯ ಖಾತೆ ಪತ್ರವನ್ನು ಅರಸಿನಮಕ್ಕಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಿಲ್ಲಾ ಸಂಯೋಜಕ ವಿಜಯ್ ಬಿ.ಎಸ್, ಕಟ್ಟಡ ಮಾಲಕ ಧರ್ಣಪ್ಪ ಗೌಡ ಭಾಗವಹಿಸಿದ್ದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇ ಗೌಡ ಕಲ್ಲಾಜೆ, ಆಡಳಿತ ಮಂಡಳಿಯ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ, ನಿರ್ದೇಶಕ ಕೆ. ಶಿವಕಾಂತ ಎನ್, ಲಕ್ಷ್ಮಣ ಗೌಡ ಕೇಶವ ಗೌಡ ಪಿ, ದಾಮೋದರ ಗೌಡ ಸುರುಳಿ, ಕೆ. ಜಯಂತ , ಮ ಸಿಬ್ಬಂದಿ ವರ್ಗದವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸಂಗೀತ ಬೊಳ ಕಾರ್ಯಕ್ರಮ ನಿರೂಪಿಸಿ, ಚೇತನಾ ಚಂದ್ರಶೇಖರ ಗೌಡ ಧನ್ಯವಾದವಿತ್ತರು.