ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2019ರಲ್ಲಿ ಆರಂಭವಾದ ದಿನದಿಂದ ಸತತವಾಗಿ ಅಭಿವೃದ್ಧಿ ಪಥದಲ್ಲಿದ್ದು ಪ್ರಸಕ್ತ ಸಾಲಿನಲ್ಲಿ 42 ಲಕ್ಷ ರೂ. ಲಾಭಗಳಿಸಿದೆ. ಉಜಿರೆಯಲ್ಲಿ ಸಂಘವು ಹೊಂದಿರುವ 15 ಕೋ. ರೂ. ಮೌಲ್ಯದ ಆಸ್ತಿಯಲ್ಲಿ 10 ಕೋ.ರೂ. ವೆಚ್ಚದ ಸುಸಜ್ಜಿತ ಸಭಾಭವನ ನಿರ್ಮಾಣ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಶೇ.10 ಡಿವಿಡೆಂಡ್ ನೀಡಲಾಗುತ್ತಿದೆ ಎಂದು ಘೋಷಣೆ ಮಾಡಲಾಯಿತು.

ಪ್ರತಿಭಾ ಪುರಸ್ಕಾರ:

ಪಿಯುಸಿಯಲ್ಲಿ ಶೇ.90 ಅಂಕಕ್ಕಿಂತ ಮೇಲ್ಪಟ್ಟು ಅಂಕ ಪಡೆದ ಕೆ.ಎಸ್.ಹಿಮಕರ ಗೌಡ ಕೂಡಿಗೆ, ಕವನಾ ಚಾರ್ಮಾಡಿ, ಪ್ರಜ್ವಲ್ ಅರಳಿ, ಎಸೆಸೆಲ್ಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಪಡೆದ ಹರ್ಷ ಎಂ.ಎಚ್. ಮರಕಡ, ಗೌತಮಿ ಡಿ. ಬಡೆಕೊಟ್ಟು, ಸಂಜನಾ ಗಾಂಜಾಲು ಅವರನ್ನು ಗೌರವಿಸಲಾಯಿತು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜಿ ವರದಿ ವಾಚಿಸಿದರು. ಉಪಾಧ್ಯಕ್ಷ ಶಿವಕಾಂತ ಗೌಡ, ನಿರ್ದೇಶಕರಾದ ಎನ್.ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ದಾಮೋದರ ಗೌಡ ಸುರುಳಿ, ಕೆ.ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡ್ಕತ್ತು, ಬಿ.ಕೃಷ್ಣಪ್ಪ ಗೌಡ ಬೇಂಗಳ, ಜಯಂತ ಗೌಡ ಓಣಿಯಾಲು, ಭರತ್ ಕುಮಾರ್ ಗೌಡ ಹಾನಿಬೆಟ್ಟು, ಕೆ.ಸಂಜೀವ ಗೌಡ ಪಾಂಚಜನ್ಯ ಸರೋಜಿನಿ, ಚೇತನಾ ಉಪಸ್ಥಿತರಿದ್ದರು.

ಚೇತನಾ ಚಂದ್ರಶೇಖರ್ ಪ್ರಾರ್ಥನೆ ನೆರವೇರಿಸಿ ನಿರ್ದೇಶಕರಾದ ಧರ್ಮರಾಜ ಗೌಡ ಅಡ್ಯಾಡಿ ವಂದಿಸಿ ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

Spread the love
  • Related Posts

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ (Student Welfare Officer) ಹಾಗೂ ಪುರುಷ ಮತ್ತು ಮಹಿಳಾ ವಾರ್ಡನ್ (Male & Female Wardens) ಸೆಕ್ಯೂರಿಟಿ…

    Spread the love

    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    ಮಂಗಳೂರು: ಮಂಗಳೂರು ಕೇಂದ್ರಿತ ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆದ ಕರ್ಣಾಟಕ ಬ್ಯಾಂಕ್ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ಅನುಭವಿ ಉದಯಕುಮಾರ್ ಹೆಬ್ಬಾರ್ ಅವರನ್ನು ನೇಮಕ ಮಾಡಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್…

    Spread the love

    You Missed

    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ – ದಿಶಾನ್ ಕ್ಯಾಟರರ್ಸ್

    • By admin
    • November 21, 2026
    • 6 views
    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    • By admin
    • November 21, 2026
    • 8 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    • By admin
    • November 19, 2026
    • 8 views
    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    • By admin
    • November 17, 2026
    • 15 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    • By admin
    • November 16, 2026
    • 10 views
    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    • By admin
    • November 15, 2026
    • 9 views
    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ: