ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ

ಶ್ರೀಕೃಷ್ಣ ಜನ್ಮಾಷ್ಟಮಿ

ಕೃಪೆ: ಸನಾತನ ಧರ್ಮ ಗ್ರಂಥಗಳು

krishna.jpg

ಆಚರಣೆ

ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ

ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಬೃಂದಾವನದಲ್ಲಿ ಡೋಲೋತ್ಸವವಾಗುತ್ತದೆ. ಅದು ನೋಡಲು ಆನಂದದಾಯಕವಾಗಿರುತ್ತದೆ. ಇತರ ಕ್ಷೇತ್ರಗಳ ಅನೇಕ ಸ್ಥಳಗಳಲ್ಲಿ ಶ್ರೀಕೃಷ್ಣನ ದೇವಾಲಯದಲ್ಲಿ ಈ ಉತ್ಸವವನ್ನು ಆಚರಿಸಲಾಗುತ್ತದೆ. ಈ ದಿನ ಕೆಲವರು ತಮ್ಮ ಮನೆಯಲ್ಲಿಯೇ ಗೋಕುಲ-ಬೃಂದಾವನದಂತೆ ಪ್ರತಿರೂಪ ಮಾಡಿ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸುತ್ತಾರೆ. ವೈಷ್ಣವ ಪಂಥೀಯರು ಈ ದಿನವನ್ನು ಅತೀವ ಭಕ್ತಿಭಾವದಿಂದ ಆಚರಿಸುತ್ತಾರೆ. ಅನೇಕ ವೈಷ್ಣವ ದೇವಾಲಯಗಳಲ್ಲಿ ದೀಪಾರಾಧನೆ, ಶೋಭಾಯಾತ್ರೆ, ಕೃಷ್ಣಲೀಲೆ, ಭಾಗವತ ಪಠಣ, ಕೀರ್ತನೆ, ಭಜನೆ, ನೃತ್ಯ-ಗಾಯನ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮವು ಶ್ರಾವಣ ಕೃಷ್ಣ ಪಾಡ್ಯದಿಂದ ಶ್ರಾವಣ ಕೃಷ್ಣಾಷ್ಟಮಿಯವರೆಗೂ ನಡೆಯುತ್ತದೆ.

ಶ್ರೀಕೃಷ್ಣಜನ್ಮಾಷ್ಟಮಿ ವ್ರತ

ಈ ವ್ರತವನ್ನು ಅಷ್ಟಮಿಯಂದು ಮಾಡಲಾಗುತ್ತದೆ ಮತ್ತು ಎರಡನೆಯ ದಿನ ಅರ್ಥಾತ್ ಶ್ರಾವಣ ಕೃಷ್ಣ ನವಮಿಯಂದು ಪಾರಾಯಣ ಮಾಡಿ ವ್ರತವನ್ನು ಸಂಪನ್ನಗೊಳಿಸುತ್ತಾರೆ. ಈ ವ್ರತವು ಎಲ್ಲರೂ ಮಾಡುವಂತಹದ್ದಾಗಿದೆ. ಈ ವ್ರತವನ್ನು ಮಕ್ಕಳು, ಯುವಕರು, ವೃದ್ಧರು, ಸ್ತ್ರೀ- ಪುರುಷರು ಎಲ್ಲರೂ ಮಾಡಬಹುದು. ಪಾಪನಾಶ, ಸೌಖ್ಯವೃದ್ಧಿ, ಸಂತತಿ-ಸಂಪತ್ತಿ ಮತ್ತು ವೈಕುಂಠ ಪ್ರಾಪ್ತಿಯು ಈ ವ್ರತದ ಫಲವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ವ್ರತಕ್ಕೆ ಸಂಬಂಧಿಸಿದ ಉಪವಾಸ

ಈ ದಿನ ದಿನವಿಡೀ ಉಪವಾಸವನ್ನು ಮಾಡಲಾಗುತ್ತದೆ. ನಿರಾಹಾರ ಉಪವಾಸವು ಸಾಧ್ಯವಿಲ್ಲದಿದ್ದರೆ ಫಲಾಹಾರ ಮಾಡಬಹುದು. ಇದಕ್ಕೆ ಒಂದು ದಿನ ಮುಂಚೆ ಅರ್ಥಾತ್ ಶ್ರಾವಣ ಕೃಷ್ಣ ಸಪ್ತಮಿಯಂದು ಅಂಶಾತ್ಮಕ ಭೋಜನವನ್ನು ಮಾಡುತ್ತಾರೆ.

ಶ್ರೀಕೃಷ್ಣಜನ್ಮಾಷ್ಟಮಿಯ ಪೂಜಾವಿಧಿ

ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಭಗವಾನ ಶ್ರೀಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದ್ದನು. ಆದುದರಿಂದ ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಧ್ಯರಾತ್ರಿಯಲ್ಲಿ ಮಾಡಲಾಗುತ್ತದೆ. ಮಧ್ಯರಾತ್ರಿ ಸ್ನಾನವನ್ನು ಮಾಡಿ ಪೂಜೆಯನ್ನು ಆರಂಭಿಸಲಾಗುತ್ತದೆ. ‘ಭಗವಾನ ಶ್ರೀಕೃಷ್ಣನ ಜನ್ಮವಾಗಿದೆ’ ಎಂಬ ಧಾರಣೆಯಿಂದ ಪೂಜೆಯನ್ನು ಮಾಡಬೇಕು.

ಪೂಜೆಯ ತಯಾರಿ

೧. ಪೂಜೆಗೆ ಮಣೆಯ ಮೇಲೆ ಭಗವಾನ ಶ್ರೀಕೃಷ್ಣನ ಮೂರ್ತಿಯನ್ನು ಇಡಿರಿ.
೨. ಅನಂತರ ಶ್ರೀಕೃಷ್ಣನ ಮೂರ್ತಿಗೆ ಚಂದನ ತಿಲಕವನ್ನು ಹಚ್ಚಿರಿ.
೩. ಅನಂತರ ಪುಷ್ಪವನ್ನು ಅರ್ಪಿಸಿರಿ.
೪. ಸಾಧ್ಯವಿದ್ದಲ್ಲಿ ಕೃಷ್ಣಕಮಲವನ್ನು ಅರ್ಪಿಸಿರಿ.
೫. ಈಗ ಶ್ರೀ ಕೃಷ್ಣನಿಗೆ ತುಳಸಿಯನ್ನು ಅರ್ಪಿಸಿರಿ.
೬. ಸಾಧ್ಯವಿದ್ದಲ್ಲಿ ತುಳಸಿಯ ಮಾಲೆಯನ್ನು ಅರ್ಪಿಸಿರಿ.
೭. ಈಗ ಊದುಬತ್ತಿಯನ್ನು ತೋರಿಸಿರಿ. ಎರಡು ಊದುಬತ್ತಿಗಳನ್ನು ತೆಗೆದುಕೊಂಡು ದಕ್ಷಿಣಾವರ್ತದಲ್ಲಿ ಮೂರು ಬಾರಿ ಸುತ್ತಿಸಿ.
೮. ಈಗ ದೀಪವನ್ನು ತೋರಿಸಿ.
೯. ಈಗ ಮೊಸರವಲಕ್ಕಿಯ ನೈವೇದ್ಯ ವನ್ನು ನಿವೇದಿಸಿ.
೧೦. ಪ್ರದಕ್ಷಿಣೆ: ಪೂಜಾವಿಧಿಯ ನಂತರ ಸಾಧ್ಯವಿದ್ದರೆ ಭಗವಾನ ಶ್ರೀಕೃಷ್ಣನಿಗೆ ಕಡಿಮೆಯೆಂದರೆ ಮೂರು ಅಥವಾ ಮೂರರ ಪಟ್ಟಿನಲ್ಲಿ ಪ್ರದಕ್ಷಿಣೆಯನ್ನು ಹಾಕಿರಿ. ಪ್ರದಕ್ಷಿಣೆಯನ್ನು ಹಾಕುವುದು ಸಾಧ್ಯವಿಲ್ಲದಿದ್ದಲ್ಲಿ ನಿಂತಲ್ಲಿಯೇ ಸುತ್ತ ತಿರುಗಿ ಪ್ರದಕ್ಷಿಣೆ ಹಾಕಿರಿ.
೧೧. ಅನಂತರ ಶರಣಾಗತ ಭಾವದಿಂದ ನಮಸ್ಕಾರ ಮಾಡುತ್ತಾ ಪ್ರಾರ್ಥನೆಯನ್ನು ಮಾಡಿರಿ.
೧೨. ಅಂತ್ಯದಲ್ಲಿ ಎಲ್ಲರೊಂದಿಗೆ ಪ್ರಸಾದವನ್ನು ಗ್ರಹಿಸಿ.
ಇಲ್ಲಿ ಗಮನದಲ್ಲಿಡಲು ಯೋಗ್ಯವಾಗಿರುವ ಅಂಶವೆಂದರೆ, ಪೂಜಾವಿಧಿಯಲ್ಲಿ ಸಂಪ್ರದಾಯ, ಪ್ರದೇಶ, ರೂಢಿ ಇತ್ಯಾದಿಗಳಿಗನುಸಾರ ಸ್ವಲ್ಪ ವ್ಯತ್ಯಾಸವಾಗಬಹುದು.

ಶ್ರೀಕೃಷ್ಣಜನ್ಮಾಷ್ಟಮಿಯಂದು ಇವುಗಳನ್ನು ಮಾಡಿ!

೧. ತಮ್ಮ ಬಂಧು ಮಿತ್ರರಿಗೆ ಕಿರುಸಂದೇಶಗಳನ್ನು ಕಳುಹಿಸಿ ಅವರಿಗೆ ಶ್ರೀಕೃಷ್ಣನ ನಾಮಜಪವನ್ನು ಮಾಡಲು ಹೇಳಿರಿ!
೨. ಶ್ರೀಕೃಷ್ಣನ ದೇವಸ್ಥಾನದಲ್ಲಿ ಸ್ವಚ್ಛತೆಯ ಸೇವೆಯನ್ನು ಮಾಡಿ!
೩. ಶ್ರೀಕೃಷ್ಣನ ಅವಮಾನವಾಗುತ್ತಿರುವುದು ಕಂಡು ಬಂದಲ್ಲಿ ಅದನ್ನು ತಡೆಗಟ್ಟಿರಿ!
೪. ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ‘ಓಂ ನಮೋ ಭಗವತೇ ವಾಸುದೇವಾಯ’ ನಾಮಜಪವನ್ನು ಮಾಡಿ! : ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣತತ್ತ್ವವು ಇತರ ದಿನಗಳ ತುಲನೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಅಂದರೆ ೧ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದುದರಿಂದ ಶ್ರೀಕೃಷ್ಣನ ಚೈತನ್ಯದಾಯಕ ತತ್ತ್ವಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಈ ಲಹರಿಗಳಿಂದ ಜೀವಕ್ಕೆ ವ್ಯಾವಹಾರಿಕ ಮತ್ತು ಆಧ್ಯಾತ್ಮಿಕ ಈ ಎರಡೂ ಸ್ತರಗಳಲ್ಲಿ ಲಾಭವಾಗುತ್ತದೆ. ಈ ಕಾರ್ಯನಿರತ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ.

ಕೃಷ್ಣಗಾಯತ್ರಿ

ದೇವಕೀನಂದನಾಯ ವಿದ್ಮಹೇ | ವಾಸುದೇವಾಯ ಧೀಮಹಿ |
ತನ್ನೋ ಕೃಷ್ಣಃ ಪ್ರಚೋದಯಾತ್ ||

ಅರ್ಥ : ನಾವು ದೇವಕೀಪುತ್ರ ಕೃಷ್ಣನನ್ನು ಅರಿತಿದ್ದೇವೆ. ವಾಸುದೇವನ ಧ್ಯಾನ ಮಾಡುತ್ತೇವೆ. ಆ ಕೃಷ್ಣನು ನಮ್ಮ ಬುದ್ಧಿಗೆ ಸತ್ ಪ್ರೇರಣೆ ಕೊಡಲಿ.

ರಂಗೋಲಿ

Page+No+26a.jpg

ಶ್ರೀಕೃಷ್ಣನ ಉಪಾಸನೆಯಲ್ಲಿನ ಕೆಲವು ದಿನನಿತ್ಯದ ಕೃತಿಗಳು

ಪ್ರತಿಯೊಂದು ದೇವತೆಯ ಉಪಾಸನೆಯ ವಿಶಿಷ್ಟ ಶಾಸ್ತ್ರವಿದೆ;ಅಂದರೆ ಪ್ರತಿಯೊಂದು ದೇವತೆಯ ಉಪಾಸನೆಯಲ್ಲಿನ ಪ್ರತಿಯೊಂದು ಕೃತಿಯನ್ನು ವಿಶಿಷ್ಟ ರೀತಿಯಲ್ಲಿ ಮಾಡುವುದರ ಹಿಂದೆ ಶಾಸ್ತ್ರವಿದೆ. ಇಂತಹ ಕೃತಿಗಳಿಂದಲೇ ಆ ದೇವತೆಯ ತತ್ತ್ವದ ಹೆಚ್ಚೆಚ್ಚು ಲಾಭವಾಗಲು ಸಹಾಯವಾಗುತ್ತದೆ. ಶ್ರೀಕೃಷ್ಣನ ಉಪಾಸನೆಯಲ್ಲಿನ ಕೆಲವು ನಿತ್ಯಕೃತಿಗಳನ್ನು ನಿರ್ದಿಷ್ಟವಾಗಿ ಹೇಗೆ ಮಾಡಬೇಕು, ಎಂಬುದರ ಕುರಿತು ಈಶ್ವರನ ಕೃಪೆಯಿಂದ ದೊರಕಿದ ಜ್ಞಾನವನ್ನು ಮುಂದೆ ಕೋಷ್ಟಕದಲ್ಲಿ ನೀಡಲಾಗಿದೆ.

krishna+puja1.jpg

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 62 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️