ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆಯ ಪ್ರಾತ್ಯಕ್ಷಿತೆ

ಬೆಳ್ತಂಗಡಿ : ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಕುರಿತ ಪ್ರಾತ್ಯಕ್ಷಿಕೆ ಗುರುವಾರ ಧರ್ಮಸ್ಥಳದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

ಡಾ.ಎ.ಪಿ.ಜೆ.ಕಲಾಂ ಶಿಷ್ಯರಾದ ಚೆನ್ನೈನ ಡಾ.ಕಾರ್ತಿಕ್ ನಾರಾಯಣ್ ಮತ್ತು ಅಣ್ಣಾ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಸೆಂಥಿಲ್ ಕುಮಾರ್ ನೇತೃತ್ವದ ಸುಗಾರಾಧನಾ ತಂಡದವರು ಕೊರೊನಾ ಸೋಂಕು ತಡೆಗಟ್ಟಲು ಹೊಸ ಸ್ಯಾನಿಟೈಸರ್ ಆವಿಷ್ಕರಿಸಿದ್ದಾರೆ.

ಕರ್ನಾಟಕದ ಸುಮಾರು ಒಂದು ಸಾವಿರ ಗ್ರಾಮಗಳನ್ನು ದತ್ತು ತೆಗೆದುಕೊಂಡು, ಒಂದು ಸಾವಿರ ಯುವಜನರಿಗೆ ಗ್ರಾಮೀಣಾಭಿವೃದ್ಧಿ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿಗೆ ಸುಗಾರಾಧನಾ ತಂಡದ ಅಶ್ರಯದಲ್ಲಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಚೆನ್ನೈನಲ್ಲಿರುವ ಅಣ್ಣಾ ವಿಶ್ವವಿದ್ಯಾಲಯದ ಎಂ.ಐ.ಟಿ.ಯಲ್ಲಿ ನಿರ್ಮಿಸಲಾದ ಬ್ಯಾಟರಿಚಾಲಿತ ಡ್ರೋನ್ ಬಳಸಿ, ಯಾವುದೇ ಕಟ್ಟಡದ ಹೊರ ಅವರಣವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬಹುದು. ಈ ಡ್ರೋನ್ 16 ಲೀಟರ್ ಸಾಮರ್ಥ್ಯದ ಔಷಧದ ಟ್ಯಾಂಕ್ ಹೊಂದಿದ್ದು, ಐದು ಗಂಟೆಗಳ ಕಾಲ ಬಳಸಬಹುದಾಗಿದೆ.

ಈ ಯೋಜನೆಯ ಕಲ್ಪನೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಕನಸಿನ ಕೂಸಾಗಿದ್ದು, ಚೆನ್ನೈ, ಬೆಂಗಳೂರು, ತಮಿಳುನಾಡಿನಲ್ಲಿ ಈಗಾಗಲೇ ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ಬಳಕೆ ಮಾಡಲಾಗಿದೆ. ಈ ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿದ ಪ್ರದೇಶಗಳಲ್ಲಿ ಕೊರೊನಾ ಸೋಂಕು ಸಂಪೂರ್ಣ ನಿವಾರಣೆಯಾಗಿದೆ. ಅಲ್ಲದೇ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಮಿಳುನಾಡು ಸರ್ಕಾರದ ಆರೋಗ್ಯ ಇಲಾಖೆ ದೃಢೀಕರಣ ಪತ್ರ ನೀಡಿದೆ ಎಂದು ಡಾ.ಕಾರ್ತಿಕ್ ನಾರಾಯಣ್ ಮಾಹಿತಿ ನೀಡಿದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 315 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 54 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ