ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸೈಂಟ್ ಮೆರೀಸ್ ಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಡೊಂಗ್ರೆ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದ ಇವರು ಮರುಮೌಲ್ಯಮಾಪನಕ್ಕೆ ಹಾಕಿದಾಗ 625 ಅಂಕ ಪಡೆದು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.

ವೈದ್ಯರಾದ ಶಶಿಕಾಂತ್ ಡೊಂಗ್ರೆ ಹಾಗೂ ದೀಪಾಲಿ ಡೊಂಗ್ರೆಯವರ ಪುತ್ರಿ ಶ್ರೇಯಾ ಡೊಂಗ್ರೆ ಈ ಬಾರಿಯ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿ ತಾಲೂಕಿನ ಜನ ಹೆಮ್ಮೆ ಪಡುವಂತಹ ಸಾಧನೆಯನ್ನು ಮಾಡಿದ್ದು, ಇದೀಗ ಎಸ್​ಎಸ್​ಎಲ್​ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ನನಗೆ 622 ಅಂಕ ಬಂದಾಗ ಸ್ವಲ್ಪ ಸಂಶಯ ಉಂಟಾಯಿತು. ಅದರೂ 625 ಅಂಕ ಬರುವ ನಿರೀಕ್ಷೆಯಲ್ಲಿದ್ದೆ. ಇಂಗ್ಲೀಷ್​ನಲ್ಲಿ 3 ಅಂಕ ಕಡಿಮೆ ಬಂದ ಬಗ್ಗೆ ಯೋಚಿಸಿ ತಂದೆ ತಾಯಿ ಹಾಗೂ ಶಾಲಾ ಶಿಕ್ಷಕರಲ್ಲಿ ಮಾತನಾಡಿ ಮರುಮೌಲ್ಯಮಾಪನಕ್ಕೆ ಹಾಕಿದೆ. ಅದರ ಫಲಿತಾಂಶ 625 ಅಂಕ ಬಂದಿದೆ. ತುಂಬಾ ಖುಷಿಯಾಗಿದೆ ಎಂದು ಶ್ರೇಯಾ ಸಂತೋಷ ಹಂಚಿಕೊಂಡರು.

ಈ ಬಾರಿಯ ಪರೀಕ್ಷೆ ಮಕ್ಕಳಿಗೆ ತುಂಬಾ ಸವಾಲಿನದ್ದಾಗಿತ್ತು. ಅದರೂ ಪ್ರಯತ್ನ ಪಟ್ಟರೆ ಫಲ ಸಿಗುತ್ತದೆ ಎಂಬುವುದಕ್ಕೆ ಇವಳೇ ಸಾಕ್ಷಿ. ನಮ್ಮ ಮಗಳ ಯಶಸ್ಸಿಗೆ ಶ್ರಮ ಪಟ್ಟ ಶಿಕ್ಷಕರಿಗೆ ಹಾಗೂ ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪೋಷಕರು ಸಂತಸ ಹಂಚಿಕೊಂಡಿದ್ದಾರೆ

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 2 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 5 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 6 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 10 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 12 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ