ಸೋಮವಾರದಿಂದ 10ನೇ ತನಕದ ತರಗತಿಗಳು ಪುನರಾರಂಭ: ಸಿ.ಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ತನಕದ ತರಗತಿಗಳನ್ನು ಪುನರಾರಂಭಿಸಲು ಸರಕಾರ ನಿರ್ಧಾರಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

READ ALSO

ಶಿಕ್ಷಣ ಸಚಿವ, ಉನ್ನತ ಶಿಕ್ಷಣ ಸಚಿವ, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರದಿಂದ ಹೈಸ್ಕೂಲ್ ಪುನರಾರಂಭಗೊಳ್ಳಲಿದೆ. 10ನೇ ತರಗತಿಯ ತನಕದ ತರಗತಿಗಳು ಆರಂಭವಾಗಲಿದ್ದು, ಪಿಯು, ಕಾಲೇಜು ಆರಂಭದ ಬಗ್ಗೆ ಸದ್ಯ ಯಾವುದೇ ನಿರ್ಧಾರವಾಗಿಲ್ಲ. ಪಿಯು ಕಾಲೇಜು ಆರಂಭದ ಬಗ್ಗೆ 2ನೇ ಹಂತದಲ್ಲಿ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್ನು ಜಿಲ್ಲಾವಾರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ನಿರ್ಧಾರ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.