ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ.

ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಫಲಿತಾಂಶದ ಮುಖ್ಯಾಂಶಗಳು:
ದಿನಾಂಕ ಮತ್ತು ಸಮಯ: ನಾಳೆ ಏಪ್ರಿಲ್ 23 ರಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ.
ವೆಬ್‌ಸೈಟ್ ಮಾಹಿತಿ: ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in e kseab.karnataka.gov.in ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು.





