ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಸೇರಿದಂತೆ ಕರಾವಳಿಯ ಪ್ರಮುಖ ಶಾಸಕರಿಗೆ ರಾಜ್ಯಮಟ್ಟದ ಮಹತ್ತರ ಜವಾಬ್ದಾರಿ!

ಬೆಂಗಳೂರು: 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ, ಅಧ್ಯಕ್ಷರು, ಸದಸ್ಯರುಗಳನ್ನು ನಾಮನಿರ್ದೇಶನ ಮಾಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.

ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕರಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರು, ಸೋಮನಗೌಡ ಬಿ. ಪಾಟೀಲ್, ಹರೀಶ್ ಪೂಂಜ, ಸಂಜೀವ ಮಠಂದೂರು, ಉದಯ ಬಿ. ಗರುಡಾಚಾರ್, ವೆಂಕಟರೆಡ್ಡಿ ಮುದ್ನಾಳ್, ಎಂ.ಬಿ. ಪಾಟೀಲ್, ಎಸ್.ಎನ್. ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ, ಎಸ್‌.ಎನ್‌. ಸುಬ್ಬಾರೆಡ್ಡಿ, ಎಸ್. ರಾಮಪ್ಪ, ಡಾ.ಕೆ. ಶ್ರೀನಿವಾಸಮೂರ್ತಿ ಮತ್ತು ರವೀಂದ್ರ ಶ್ರೀಕಂಠಯ್ಯ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸದನದಲ್ಲಿ ಸರ್ಕಾರ ನೀಡುವ ಭರವಸೆಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ಪರಿಶೀಲಿಸುವುದು ಸಮಿತಿಯ ಹೊಣೆಗಾರಿಕೆ. ಪ್ರತಿ ವಾರ ಸಮಿತಿ ಸದಸ್ಯರು ಸಭೆ ಸೇರಿ, ಚರ್ಚಿಸಿ ಸರ್ಕಾರ ನೀಡಿದ ಭರವಸೆಗಳು ಈಡೇರಿವೆಯೇ, ಯಾವ ಹಂತದಲ್ಲಿವೆ ಎಂಬ ಕುರಿತು ಚರ್ಚೆ ನಡೆಸಲಿದೆ.

ಇನ್ನುಳಿದಂತೆ ಆಯ್ಕೆಯಾಗಿರುವ ಸಮಿತಿಯ ಅಧ್ಯಕ್ಷರ ವಿವರ

  • ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಅಂಗಾರ
  • ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರನ್ನಾಗಿ ರಾಮಲಿಂಗಾರೆಡ್ಡಿ
  • ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ
  • ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ದಿನಕರ್ ಕೇಶವ ಶೆಟ್ಟಿ
  • ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಕುಮಾರ್ ಬಂಗಾರಪ್ಪ
  • ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಗೆ ಅಧ್ಯಕ್ಷರಾಗಿ ಸಾರಾ ಮಹೇಶ್
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆಯನ್ನಾಗಿ ಕೆ.ಪೂರ್ಣಿಮಾ
  • ಗ್ರಂಥಾಲಯ ಸಮಿತಿಗೆ ವಿಧಾನ ಪರಿಷತ್ತಿನ ಸಭಾಪತಿಯವರನ್ನು ಅಧ್ಯಕ್ಷರನ್ನಾಗಿ,
  • ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ಜಿ.ಸೋಮಶೇಖರ ರೆಡ್ಡಿ
  • ವಿಧಾನಸಭೆಯ ಸಮಿತಿಗಳಾದಂತ ಅಂದಾಜುಗಳ ಸಮಿತಿಗೆ ಅಭಯ್ ಪಾಟೀಲ್,
  • ಹಕ್ಕು ಬಾಧ್ಯತೆಗಳ ಸಮಿತಿಗೆ ಬಸನಗೌಡ ಆರ್ ಪಾಟೀಲ್ ಯತ್ನಾಳ್,
  • ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಆನಂದ್ ಆಲಿಯಾಸ್ ವಿಶ್ವನಾಥ್ ಚಂದ್ರಶೇಖರ ಮಾಮನಿ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ