ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರದ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದ್ದು, ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸೂಕ್ತ ಚಿಕಿತ್ಸೆಗೆ ಅನುಮತಿ ನೀಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಅದೇಶ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲು ಆದೇಶಿಸಲಾಗಿದೆ.
ಸೂಕ್ತ ವ್ಯವಸ್ಥೆ ಹಾಗೂ ಸಾಮರ್ಥ್ಯವನ್ನು ಹೊಂದಿರುವ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲೂ ಸಹ ಬ್ಲ್ಯಾಕ್ ಫಂಗಸ್ ಸೋಂಕಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.