ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ವದಂತಿಗಳು ಜೋರಾದ ಹಿನ್ನೆಲೆಯಲ್ಲಿ ಈ ಊಹಾಪೋಹಗಳಿಗೆ ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ಪಷ್ಟನೆ ನೀಡಿದ್ದಾರೆ.
“ಕೆಲವು ಟಿ.ವಿ ವಾಹಿನಿಗಳು ಪದೇ ಪದೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ.ಬಿ ಎಸ್ ಯೆಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗುತ್ತದೆ ಎಂದು ವರದಿಗಳನ್ನು ಪ್ರಸಾರ ಮಾಡುತ್ತಿದೆ. ಈ ವರದಿಗಳನ್ನು ಬಿಜೆಪಿ ಖಡಾಖಂಡಿತವಾಗಿ ಅಲ್ಲೆಗೆಳೆಯುತ್ತದೆ.
ಈ ವರದಿಗಳು ಸಂಪೂರ್ಣ ನಿರಾಧಾರ ಮತ್ತು ಸತ್ಯಕ್ಕೆ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವಂಥದ್ದಾಗಿದೆ ಎಂದು ತಮ್ಮ ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.