ರಾಜ್ಯ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ

ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ

ಸರಕಾರ ಸದನದಲ್ಲಿ ಮಂಡಿಸಿರುವ ಮತಾಂತರ ನಿಷೇಧ ವಿಧೇಯಕವನ್ನು ನಾನು ಸ್ವಾಾಗತಿಸುತ್ತೇನೆ. ಸಂಘರ್ಷವಿಲ್ಲದ ಶಾಂತಿ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಹಾಗೂ ಬಲವಂತದ ಮತಾಂತರವನ್ನು ಹತ್ತಿಕ್ಕಲು ಈ ಕಾಯ್ದೆ ಸಮರ್ಪಕವಾಗಿ ಬಳಕೆಯಾಗಬೇಕು. ಈ ಕಾಯ್ದೆಯಿಂದ ಸಮಾಜದಲ್ಲಿ ಶಾಂತಿ ನೆಲೆಗೊಳ್ಳಲಿ ಈ ಕಾಯ್ದೆ ಶೀಘ್ರ ಅನುಷ್ಠಾನಕ್ಕೆ ಬರಬೇಕು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.

READ ALSO

ಪ್ರತಿಪಕ್ಷ ಕಾಂಗ್ರೆಸ್ ವಿರೋಧದ ಮಧ್ಯೆಯೇ ಮತಾಂತರ ನಿಷೇಧ ವಿಧೇಯಕವನ್ನು ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಸರಕಾರದ ಈ ಕ್ರಮವನ್ನು ರಾಜ್ಯ ಬಿಜೆಪಿ ಸಮರ್ಥಿಸಿಕೊಂಡಿದೆ. ಭೋಜನ ವಿರಾಮದ ನಂತರ ಕಲಾಪ ಆರಂಭವಾಗುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.

‘ಬಲವಂತದ ಮತಾಂತರವನ್ನು ತಡೆಯುವುದೇ ಮತಾಂತರ ನಿಷೇಧ ಕಾಯ್ದೆಯ ಉದ್ದೇಶ. ಆದರೆ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್‌ ನಾಯಕರು ಕ್ರೈಸ್ತ ಸಮುದಾಯವನ್ನು ಈ ಕಾಯ್ದೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಇದೇ ಕಾಂಗ್ರೆಸ್‌ ಸಿಎಎ ವಿರುದ್ಧ ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿತ್ತು ‘ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.