ಬೆಂಗಳೂರು: ರಾಜ್ಯದಲ್ಲಿ ಕೋಳಿ ಅಂಕ ನಿಷೇಧ ಹಾಗೂ ಟಗರು ಕಾಳಗ ಸಂಪೂರ್ಣ ನಿಷೇಧ ಕುರಿತು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಆದೇಶದಂತೆ ರಾಜ್ಯದ ಆಯಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು ಸೂಚನೆ ಹೊರಡಿಸಿದ್ದಾರೆ.
ಈಗಾಗಲೇ ಬೆಂಗಳೂರು ಪೊಲೀಸ್ ಕಚೇರಿಯಿಂದ ಸೂಚನೆ ಬಂದಿದ್ದು ಕೋಳಿ ಅಂಕ ಮತ್ತು ಠಗರು ಕಾಳಗ ನಿಲ್ಲಿಸುವಂತೆ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಕೋರಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆಯ ಎಲ್ಲಾ ಪೊಲೀಸ್ ಉಪವಿಭಾಗಾಧಿಕಾರಿಗಳು, ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.