TRENDING
Next
Prev

ಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! ಆರೋಪಿಯನ್ನು ಬಂಧಿಸಿದ ರೈಲ್ವೇ ಪೋಲಿಸರು!

ಮಂಗಳೂರು : ಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯೋರ್ವವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ವಿದ್ಯಾರ್ಥಿನಿ ಕೇರಳದ ವರ್ಕಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಳು. ಮುಂಜಾನೆಯ ವೇಳೆಯಲ್ಲಿ ವಿದ್ಯಾರ್ಥಿನಿ ಮಲಗಿದ್ದ ವೇಳೆಯಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿ ಕಾಮುಕನ ಆಟವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ.

READ ALSO

ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.