ಸುಬ್ರಹ್ಮಣ್ಯ ದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದು ವಾಹನ ಜಖಂ!

ನೆಲ್ಯಾಡಿ: ಚಲಿಸುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಮರವೊಂದು ಮುರಿದು ಬಿದ್ದ ಘಟನೆ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮರ ಬಿದ್ದ  ಪರಿಣಾಮ ವಾಹನ ಜಖಂಗೊಂಡಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

READ ALSO