ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು.
ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ನವದೆಹಲಿ ಮತ್ತು ತಿರುವನಂತಪುರಂಗೆ ಇನ್ಫೋಸಿಸ್ ಫೌಂಡೇಶನ್ ಹಣ ಒದಗಿಸುತ್ತದೆ ಎಂದು ಅವರು ಘೋಷಿಸಿದರು