ಸುಳ್ಯ: ರಾಷ್ಟ್ರೀಯಹೆದ್ದಾರಿ 275ರ ಸುಳ್ಯ ಸಮೀಪದ ಜಾಲ್ಸೂರು ಅಡ್ಕಾರಿನಲ್ಲಿ ಅಗ್ನಿಶಾಮಕ ದಳದ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ.
ಅದೃಷ್ಟವಶಾತ್ ಶಾಮಕ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ.
ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಮಗುಚಿ ಬಿದ್ದಿದ್ದು ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ತೆರವು ಕಾರ್ಯನಡೆಸಿದ್ದಾರೆ.