ರಾಜ್ಯದಲ್ಲಿ ಮತ್ತೆ ಭಾನುವಾರ ಕಂಪ್ಲೀಟ್ ಲಾಕ್! ಸರಕಾರಿ ನೌಕರರಿಗೆ ಇನ್ನು ವಾರದಲ್ಲಿ 5ದಿನ ಕೆಲಸ!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಅಂದರೆ ಜುಲೈ 5 ರ ಬಳಿಕ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಲಾಕ್ ಡೌನ್ ಬದಲಾಗಿ ವೀಕೆಂಡ್ ಸಂಪೂರ್ಣ ಬಂದ್ ಮಾಡಲಾಗುವುದು. ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡುವ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

READ ALSO

ಜುಲೈ 5ರಿಂದ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಆಗಲಿದೆ. ಆಟೋ, ಟ್ಯಾಕ್ಸ್, ಕ್ಯಾಬ್, ಬಸ್ ಯಾವುದೇ ವಾಹನ ಸಂಚಾರ ಇರುವುದಿಲ್ಲ. ಅಲ್ಲದೇ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಮಾತ್ರ ಕೆಲಸವಿರಲಿದೆ. ನಾಳೆಯಿಂದ ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ ಎಂದು ಹೇಳಿದರು.