‘ಸುಪ್ರೀಂ ಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ನೇಮಕ ಮಾಡಿ ‘ರಾಷ್ಟ್ರಪತಿ ಆದೇಶ’

ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಇಂತಹ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ, ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ನೇಮಕ ಮಾಡಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ.

ಈ ಹಿಂದೆ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದು, ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡುವಂತೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಕೋರಿಕೊಂಡಿದ್ದರು.

READ ALSO

ಇದರ ಬೆನ್ನಲ್ಲೇ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ರಮಣ ನೇಮಕ ಮಾಡಿ, ಆದೇಶಿಸಿದ್ದಾರೆ.