ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ಬೆಂಗಳೂರು: ಮಾಸ್ಕ್ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್ ನಿಂದ ಇಳಿಸಿದ ಘಟನೆ ಬಗ್ಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ಚಿಲ್ಲರೆ ಕಾಸಿನ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸಚಿವರ ಸಿಟಿ ರೌಂಡ್ಸ್ ಕುರಿತಂತೆ ಮಾಹಿತಿ ಸಿಕ್ಕ ತಕ್ಷಣ ನಾನು ಸಚಿವ ಬೈರತಿ ಸುರೇಶ್ ಜೊತೆ ಮಾತನಾಡಿಸಲು ಸಾಕಷ್ಟು ಬಾರಿ ಫೋನ್ ಮಾಡಿದೆ. ಆದರೆ ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುವ ಅವಕಾಶ ದೊರಕಿತ್ತು ಎಂದು ತಿಳಿಸಿದ್ದಾರೆ. ಸಚಿವರು ಈ ರೀತಿ ಮುಖಕ್ಕೆ ಮಾಸ್ಕ್ ಧರಿಸಿ ಮಾರುವೇಷದಲ್ಲಿ ಹೋಗಿ ತನ್ನ ಇಲಾಖೆಯ ಕಾರ್ಯವೈಖರಿಯ ಪರಿಶೀಲನೆ ಮಾಡಿರುವುದು ನಿಜಕ್ಕೂ ಸ್ತುತ್ಯಾರ್ಹ.

ಸಚಿವರು 100 ರೂಪಾಯಿ ನೋಟನ್ನು ತನ್ನ ಟಿಕೆಟ್ ಗೆಂದು ಕೊಟ್ಟಾಗ, ಕಂಡಕ್ಟರ್ ಚಿಲ್ಲರೆ ಕೊಡಿ ಎಂದು ಕೇಳಿರುವುದು ಸಹಜವೇ. ಆದರೆ ಇದು ಚಿಲ್ಲರೆ ಕೊಟ್ಟು ಸಹಕರಿಸಿ ಎಂಬ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿ ಮಾಡಲು ವ್ಯವಸ್ಥೆ ಇರುವಾಗ ಬಿಎಂಟಿಸಿ ಬಸ್ ಗಳಲ್ಲೂ ಕಂಡಕ್ಟರ್ ಬಳಿ ಇರುವ ಟಿಕೆಟ್ ಕೊಡುವ ಮೆಷಿನ್‌ ನಲ್ಲಿಯೇ ಈ ವ್ಯವಸ್ಥೆ ಇರುತ್ತದೆ ಎಂಬುದು ನನಗಿರುವ ಮಾಹಿತಿ. ಆಗಿದ್ದ ಮೇಲೆ ಮಂತ್ರಿಗಳಿಗೆ ಈ ರೀತಿಯ ಅನುಭವ ಹೇಗೆ ಆಯಿತು ಎಂದು ಪ್ರಶ್ನಿಸಿದ್ದಾರೆ.

ಸಂಜೆ 7.10ರಿಂದ ರಾತ್ರಿ 9.10ರವರೆಗೆ ಸುಮಾರು ಎರಡು ಗಂಟೆಗಳ ಕಾಲ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿದ ಸಚಿವ ಬೈರತಿ ಸುರೇಶ್ ಅವರು, 10ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. ಜಯಮಹಲ್, ಆರ್‌.ಟಿ.ನಗರ, ಹೆಬ್ಬಾಳ, ನಾಗವಾರ, ಹೆಣ್ಣೂರು ಹಾಗೂ ಗೆದ್ದಲಹಳ್ಳಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಬಸ್ ಏರಿ ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್ ಖರೀದಿಸಿ ಪ್ರಯಾಣಿಸಿದರು.

ಇನ್ನು ಬಸ್ ನಿಲ್ದಾಣವೊಂದರಲ್ಲಿ ಬಸ್ ನಿಲ್ಲಿಸದ ಇಲಾಖೆಯ ನಿರ್ವಾಹಕ ಮತ್ತು ಬಸ್ ಚಾಲಕನನ್ನು ಅಮಾನತು ಮಾಡಿದ್ದಾರೆ. ಪ್ರಯಾಣಿಕರೊಬ್ಬರು ಕೈ ತೋರಿಸಿದರೂ ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದೇ ಮುಂದುವರೆದಿದ್ದರಿಂದ ಕೆಎ 57 ಎಫ್ 3372 ಸಂಖ್ಯೆಯ ಬಿಎಂಟಿಸಿ ಬಸ್‌ನ ಚಾಲಕ ಮುಷ್ತಾಕ್ ಮತ್ತು ನಿರ್ವಾಹಕ ದಯಾನಂದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 2 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 4 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 6 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 9 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 14 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!