ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್ ಕಾಲೇಜ್ ಬಳಿ ಖಾಸಗಿ ಬಸ್ ಅಪಘಾತ ನಡೆದಿದ್ದು ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತವಾದ ಮಾಹಿತಿ ತಿಳಿದು ಆರೋಗ್ಯ ಸಚಿವರಾದ ಡಾ.ಸುಧಾಕರ್ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಆಸ್ಪತ್ರೆಗೆ ಬೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಪುಂಜಾಲಕಟ್ಟೆ, ಮೂರ್ಜೆ, ವಾಮದಪದವು , ಮಾರ್ಗವಾಗಿ ಬಿ. ಸಿ ರೋಡಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಈ ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಹಲವು ವಿದ್ಯಾರ್ಥಿಗಳು ಪರೀಕ್ಷೆಗೆಂದು ತೆರಳುತ್ತಿದ್ದರು.