ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸ್ವಸ್ತಿಕ್ ಕನ್ಯಾಡಿಯವರಿಗೆ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್(ರಿ) ಚಿಕ್ಕಬಳ್ಳಾಪುರ ಮತ್ತು ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಯಲಹಂಕ ಬೆಂಗಳೂರು ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ
ಕಲೆ, ಸಾಹಿತ್ಯ, ಸಾಂಸ್ಕೃತಿಕ, ಪತ್ರಿಕೋದ್ಯಮ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಗುರುತಿಸಿ ‘ರಾಜ್ಯ ಯುವರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇವರು ಕಲ್ಮಂಜ ಗ್ರಾಮದ ರಮೇಶ್ ಗೌಡ ಮತ್ತು ಸುಧಾ ದಂಪತಿಗಳ ಪುತ್ರನಾಗಿದ್ದು ಭಾಷಣ, ಪ್ರಬಂಧ, ಲೇಖನ, ಸಾಹಿತ್ಯಗಳಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದು ಅನೇಕ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಈ ಹಿಂದೆ ಪ್ರಜಾವಾಣಿ ಯುವಸಾಧಕ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಹಾಗೂ ಇನ್ನಿತರ ಪುರಸ್ಕಾರಗಳು ಲಭಿಸಿವೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾಗಿಯೂ ಸೇವೆ ಸಲ್ಲಿಸುತಿದ್ದಾರೆ.
ತನ್ನ ಬಿಡುವಿನ ಸಮಯದಲ್ಲಿ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ತುಂಬುವ ಕೆಲಸ ಕಾರ್ಯಗಳನ್ನು ನೀಡುತ್ತಾ ಬರುತಿದ್ದಾರೆ.
ಪ್ರಸ್ತುತ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ದ್ವಿತೀಯ ವರ್ಷದಲ್ಲಿ ಓದುತ್ತಿದ್ದಾರೆ.