ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಏಪ್ರಿಲ್ 16 ರಂದು ನೆರಿಯದ ಬಯಲು ಬಸದಿಯ ಹತ್ತಿರ ಶ್ರೀಮತಿ ಶಿಲ್ಲಿಯವರ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಮುಂಡಾಜೆ ಪ್ರಾ.ಕೃ.ಪ.ಸ.ಸಂಘ(ನಿ.), ಅಧ್ಯಕ್ಷರಾದ ಶ್ರೀ ಪ್ರಕಾಶ್ ನಾರಾಯಣ ರವರು ಮಾತನಾಡಿ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ಯಾಡಿ ಸೇವಾಭಾರತಿಯ ಖಜಾಂಚಿ ಶ್ರೀ ಎ ಜೈರಾಜ್ ಸಾಲ್ಯಾನ್, ಟ್ರಸ್ಟಿ ಶ್ರೀಮತಿ ಸ್ವರ್ಣಗೌರಿ, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಮಮತಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 23 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಸಜಿತಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ಸಜಿತಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಶ್ರೀಮತಿ ಗಿರಿಜಾ ಸ್ವಾಗತಿಸಿ, ಸೇವಾಭಾರತಿ ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋಆರ್ಡಿನೇಟರ್ ಕು. ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ರಜನಿ ಧನ್ಯವಾದವಿತ್ತರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ