
ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ ಹೆಗ್ಗಡೆಯವರು ಮಹಿಳೆಯರಿಗೆ ಸ್ವಾವಲಂಬನೆ ಜೀವನ ನಡೆಸುವ ಉದ್ದೇಶದಿಂದ ಇಂತಹ ತರಬೇತಿಗಳನ್ನು ಆಯೊಜನೆ ಮಾಡುವ ಮುಖಾಂತರ ಸ್ಥಳೀಯವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸ್ವ ಉದ್ಯೋಗ ತರಬೇತಿ ನಿಡಲು ಅವಕಾಶ ಮಾಡಿರುತ್ತಾರೆ ಅದರಂತೆ ಈ ದಿನ,ಹಾನುಬಾಳ ಗ್ರಾಮದಲ್ಲಿ, ಟೈಲರಿಂಗ್ ತರಬೇತಿ ಉದ್ಘಾಟನೆ ಕಾರ್ಯಕ್ರಮ ಮಾಡಿದ್ದು,ಈ ಕಾರ್ಯಕ್ರಮದ ಅಧ್ಯಕ್ಷತೆ ಶ್ರೀ ಸಂತೋಷ ಕೆ ಆರ್ ಅಧ್ಯಕ್ಷರು ಗ್ರಾಮ ಪಂಚಾಯಿತಿ ಹಾನಬಾಳ್ , ಈ ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ರಾಜೇಶ್ ಎಮ್ , ಯೊಜನಾದಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ), ನೆರವೇರಿಸಿದರು ಈ ಸಂದರ್ಭದಲ್ಲಿ ಪ್ರೇಮಾ ಟೈಲರಿಂಗ್ ಟೀಚರ್ ಹಾಗೂ ಹಷ೯ ಜಯಂತ ಒಕ್ಕೂಟ ಅಧ್ಯಕ್ಷರು, ಮಂಜುಳಾ ಜ್ಞಾನ ವಿಕಾಸ ಸಮನ್ವಯಧಿಕಾರಿ ಮೊಹಿನಿ ವಲಯದ ಮೇಲ್ವಿಚಾರಕರು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.