ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ತುಂಬೆತಡ್ಕ: ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್ 02 ರಂದು ರಾಣೆಯರ್ ಸಭಾಭವನ ತುಂಬೆತಡ್ಕದಲ್ಲಿ ನಡೆಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಎಂ.ಎಸ್‌ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಖಜಾಂಚಿ ಮತ್ತು ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ರವರು ಮಾತನಾಡಿ ಯಾವುದೇ ವಿದ್ಯೆಯಾದರು ನಮಗೆ ಅದು ಎಂದಿಗೂ ಶಾಶ್ವತ. ಮಹಿಳೆಯರು ಯಾವ ವಿಷಯದಲ್ಲೂ ಹಿಂದುಳಿಯದೆ ಸ್ವಾವಲಂಬಿ ಜೀವನವನ್ನು ಮಾಡುತ್ತ ಮುನ್ನಡೆಯುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಪ್ರತಿಮಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ನಮ್ಮ ಸಂಸ್ಥೆಯ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ಪ್ರತಿಮಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಅರಸಿನಮಕ್ಕಿ, ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ನೀತಾ ರಾಧೇಶ್ ಆಚಾರ್ಯರವರು ಸೇವಾಭಾರತಿ ಸಂಸ್ಥೆಯ ಜೊತೆ ಕೈ ಜೋಡಿಸಿ ಅರಸಿನಮಕ್ಕಿ, ನೆಲ್ಯಡ್ಕ ಹಾಗೂ ತುಂಬೆತಡ್ಕದಲ್ಲಿ ಸತತ 3 ಶಿಬಿರದ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು 91 ಮಂದಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಕಾರಣಿಕರ್ತರಾಗಿದ್ದಾರೆ ಇವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ನಿರ್ದೇಶಕರಾದ ಶ್ರೀಮತಿ ಬೇಬಿ, ಬೆಳ್ತಂಗಡಿ LIC of INDIA, Developement Officer ಶ್ರೀ ಉದಯಶಂಕರ್ ಕೆ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರೇಮಚಂದ್ರ, ನಿವೃತ್ತ ಯೋಧರು ಶ್ರೀ ಕೆ. ಮಹಾಬಲ ತುಂಬೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 31 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಶ್ರೀಮತಿ ವೇದಾವತಿ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಆಶಾ ಧನ್ಯವಾದವಿತ್ತರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 76 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 26 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 293 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 50 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 103 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 49 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ