ಅತಿಯಾದ ಅರಶಿನ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಅಧಿಕ ಪ್ರಮಾಣದಲ್ಲಿ ಅರಶಿನ ಬಳಕೆ ಮಾಡುವವರು ಈ ವರದಿ ನೋಡಿ

ಅರಿಶಿಣವನ್ನು ಹೆಚ್ಚು ಸೇವಿಸುವದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ

ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲೆ ಪದಾರ್ಥವಾಗಿ ಅರಿಶಿಣವನ್ನು ಬಳಸುತ್ತೇವೆ. ಮುಖದ ಕಾಂತಿಯನ್ನೂ ಸಹ ಹೆಚ್ಚಿಸಿಕೊಳ್ಳಲು ನೈಸರ್ಗಿಕ ಅರಿಶಿಣವನ್ನು ತೇಯ್ದು ಮುಖಕ್ಕೆ ಹಚ್ಚಿಕೊಳ್ಳುತ್ತೇವೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ ಮತ್ತು ಉರಿಯೂತ ಹೋಗಲಾಡಿಸುವ ಗುಣಲಕ್ಷಣಗಳನ್ನು ಹೊಂದಿದೆ. ಕೊರೊನಾ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸುತ್ತಿದ್ದಾರೆ. ಅರಿಶಿಣವು ಅರೋಗ್ಯಕ್ಕೆ ಎಷ್ಟು ಪ್ರಯೋಜನಗಳನ್ನು ನೀಡುತ್ತದೆಯೋ, ಅತಿಯಾದ ಬಳಕೆ ಅಷ್ಟೇ ಹಾನಿಯನ್ನುಂಟು ಮಾಡುತ್ತದೆ.

ಅರಿಶಿಣವನ್ನು ಹೆಚ್ಚು ಸೇವಿಸುವುದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ. ಕಬ್ಬಿಣವು ಖನಿಜವಾಗಿದ್ದು ಅದು ದೇಹದಲ್ಲಿ ಹಿಮೋಗ್ಲೋಬಿನ್​ ಅಂಶವನ್ನು ತಯಾರಿಸಲು ಸಹಾಯಕವಾಗಿದೆ.

ಅರಿಶಿಣದಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಅಡುಗೆ ಪದಾರ್ಥಗಳಲ್ಲಿ ರುಚಿಯನ್ನು ಹೆಚ್ಚಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸಬಹುದು. ಆದರೆ ಅತಿಯಾಗಿ ಅರಿಶಿಣ ಬಳಸುವುದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅರಿಶಿಣವನ್ನು ಅತಿಯಾಗಿ ಸೇವಿಸುವುದರಿಂದ ಯಕೃತ್ತು ಗಾತ್ರ, ಹೊಟ್ಟೆಯಲ್ಲಿ ಹುಣ್ಣು, ಉರಿಯೂತ ಹೆಚ್ಚಾಗುವಂತಹ ಸಮಸ್ಯೆ ಕಾಡತೊಡಗುತ್ತದೆ. ಇದಲ್ಲದೇ ಪಿತ್ತಜನಕಾಂಗ ಮತ್ತು ಕರುಳಿನ ಕ್ಯಾನ್ಸರ್​ ಅಪಾಯವೂ ಹೆಚ್ಚಾಗುತ್ತದೆ.

ರಕ್ತಹೀನತೆ, ಮಧುಮೇಹ, ರಕ್ತ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಾಗಿ ಅರಿಶಿಣ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಿ. ಹಲವು ರೋಗಗಳು ನಮ್ಮ ಆಹಾರ ಕ್ರಮದಿಂದಲೇ ಹುಟ್ಟಿಕೊಳ್ಳುತ್ತವೆ. ಅವುಗಳಿಗೆ ಪರಿಹಾರವೂ ಸಹ ಆಹಾರ ಕ್ರಮ. ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವಿಸುವುದರ ಜತೆಗೆ ನಿಯಮಿತವಾಗಿ ಆಯುರ್ವೇದದ ಹಿನ್ನೆಲೆಯುಳ್ಳ ಆಹಾರವನ್ನೂ ಸೇವಿಸಬೇಕು. ಬಾಯಿಗೆ ರುಚಿ ಎಂದು ಅತಿಯಾಗಿ ಆಹಾರ ಸೇವಿಸಿದರೆ ನಿಮ್ಮ ಆರೋಗ್ಯಕ್ಕೆ ಹಾನಿಯುಂಟಾಗಬಹುದು. ಹಿತ-ಮಿತವಾಗಿ ಆಹಾರ ಸೇವಿಸಿ ನಿಮ್ಮ ಆರೋಗ್ಯ ಆರೈಕೆ ಮಾಡಿಕೊಳ್ಳಿ

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ