ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

ರಾಯಚೂರು: ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಡಲದಿನ್ನಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ಜಾಡಲದಿನ್ನಿ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮದ ಕೂಲಿಕಾರರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಜಾಡಲದಿನ್ನಿ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ನಾಲೆಯ ಮುಖ್ಯ ಕಾಲುವೆಗೆ ಇಳಿದಿದೆ. ಕೆನಾಲ್ ಬಳಿಯ ಕಚ್ಚಾರಸ್ತೆಯಿಂದ ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಜಾರಿದೆ. ಕಾಲುವೆಗೆ ವಾಹನ ಬಿದ್ದ ಬಳಿಕ, ಚಾಲಕ ಗಾಡಿ ಆಫ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ನಡು ನೀರಿನಲ್ಲೇ ನಿಂತ ಟಾಟಾ ಏಸ್‌ನಲ್ಲಿದ್ದ ಮಹಿಳೆಯರು, ಗಾಬರಿಯಾಗಿ ಚೀರಾಡಿದ್ದಾರೆ. ಮಹಿಳೆಯರ ಶಬ್ದ ಕೇಳಿ ರಸ್ತೆಯಿಂದ ಹೋಗುತ್ತಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಕೂಲಿ ಕಾರ್ಮಿಕ ಮಹಿಳೆಯರನ್ನು ರಕ್ಷಿಸಿದ್ದಾರೆ.ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಹಿಳೆಯರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯರು ಸಿರವಾರ ತಾಲ್ಲೂಕಿನ ಜಂಬಲದಿನ್ನಿ ಗ್ರಾಮಸ್ಥರು ಎಂದು ಹೇಳಲಾಗಿದೆ.

ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ.

ಘಟನೆಯ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಚಾಲಕನ ಹಾಗೂ ಸ್ಥಳೀಯ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಹತ್ತಿಬಿಡಿಸಲು ಕೃಷಿ ಕಾರ್ಮಿಕರನ್ನು ದನಕರುಗಳಂತೆ ಸಾಗಿಸುತ್ತಿದ್ದು ಪೊಲೀಸ್ ಇಲಾಖೆ ಮೌನ ವಹಿಸಿದೆ. ಇನ್ನಾದರೂ, ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕೂಲಿ ಕಾರ್ಮಿಕರನ್ನು ಸಾಗಿಸುವುದನ್ನು ತಡೆಗಟ್ಟಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 265 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 309 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ