ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಲಾಕ್​ಡೌನ್ ಜಾರಿಯಲ್ಲಿದ್ದು, ಖಾಸಗಿ ವಾಹನಗಳು ರಸ್ತೆಗಿಳಿಯುವುದನ್ನು ನಿರ್ಬಂಧಿಸಿ ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿತ್ತು.

READ ALSO

ಈ ಹಿನ್ನೆಲೆಯಲ್ಲಿ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಜತೆಗೆ ಮೇ ಮತ್ತು ಜೂನ್​ ಎರಡೂ ತಿಂಗಳಿಗೆ ಈ ವಿನಾಯಿತಿ ಘೋಷಿಸಿದ್ದರೆ ಸಾರ್ವಜನಿಕರಿಗೆ ಇನ್ನೂ ಅನುಕೂಲವಾಗಬಹುದಿತ್ತು ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.