ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ.

ಸದ್ಯ ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು.

ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು ನಗರದ IDSG ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆ ಮಾಡಲಾಗಿದೆ. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.

ಶಾಸಕ ಟಿ.ಡಿ.ರಾಜೇಗೌಡ ಗೆದ್ದಿದ್ದಾರೆ ಎಂದು ಅಭಿಮಾನಿಗಳ ಸಂಭ್ರಮ
ಇನ್ನು ಅತ್ತ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಂಭ್ರಮಿಸಿದರು. 267 ಮತಗಳು ಬಹುತೇಕ ತಿರಸ್ಕೃತ ಬೆನ್ನಲ್ಲೇ ರಾಜೇಗೌಡ ಗೆದ್ದರು ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.

ಗೆಲುವಿನ ಬಗ್ಗೆ ಕಾಂಗ್ರೆಸ್ ‌ಶಾಸಕ ರಾಜೇಗೌಡ ಹೇಳಿದ್ದಿಷ್ಟು
ಇನ್ನು ಈ ಬಗ್ಗೆ ಕಾಂಗ್ರೆಸ್ ‌ಶಾಸಕ ರಾಜೇಗೌಡ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ. ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದರು.

ಈ ಹಿಂದೆ ಮತ‌ಎಣಿಕೆ ವೇಳೆ ಪ್ರತಿಯೊಂದು ಮತಗಳನ್ನ ಪರಿಶೀಲನೆ ಮಾಡಿದ್ದರೂ ಆರೋಪ ಮಾಡಿದ್ದರು. ಕೆಲವು ಟ್ರಂಕ್ ಗಳು ಓಪನ್ ಆಗಿತ್ತು, ಅದಕ್ಕೆ ನಾನು ಟ್ಯಾಂಪರಿಂಗ್ ಮಾಡಿರಬಹುದು ಎಂದು ಆರೋಪ ಮಾಡಿದ್ದೆ. ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಅಂದ್ರು. ಹಾಗಾಗಿ ನನಗೆ ಅನುಮಾನ ಬಂದಿತ್ತು. 12 ಅಂಚೆ ಮತಗಳು ನಾಪತ್ತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.


2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರವು ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು, ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು (ಮೇ 2, 2026) ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ. ರಾಜೇಗೌಡ ಅವರೇ ಜಯಭೇರಿ ಬಾರಿಸುವ ಮೂಲಕ ತಮ್ಮ ಗೆಲುವನ್ನು ಮರುಸ್ಥಾಪಿಸಿಕೊಂಡಿದ್ದಾರೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 6 views

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 12 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 7 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ