ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದು, ಬಜೆಟ್ ಪೂರ್ವಭಾವಿಯಾಗಿ ನಡೆದ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಶಿಕ್ಷಕರ ನೇಮಕಾತಿ ಸೇರಿ 5 ಪ್ರಮುಖ ಪ್ರಸ್ತಾವನೆ ಮಂಡಿಸಲಾಗುವುದು.
10 ಸಾವಿರ ಶಿಕ್ಷಕರ ನೇಮಕ, ಒಂದು ಸಾವಿರ ಶಾಲೆಗಳನ್ನು ಉಭಯ ಮಾಧ್ಯಮ ಶಾಲೆಗಳಾಗಿ ಬದಲಾವಣೆ, ರಾಜ್ಯ ಶಾಲಾ ಶಿಕ್ಷಣ ಆಯೋಗ ಸ್ಥಾಪನೆ, ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ, ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳ ಆರಂಭಿಸುವ ಕುರಿತಾಗಿ ಚರ್ಚೆ ನಡೆಸಿದ್ದು, ಇವೆಲ್ಲವುಗಳ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.