ಶೋಪಿಯಾನ್ ನಲ್ಲಿ ಸೇನೆಯ ಕಾರ್ಯಾಚರಣೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ ಮೂವರು ಉಗ್ರರು ಫಿನಿಶ್!

READ ALSO

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ಮೂವರು ಉಗ್ರರು ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದವರು ಎಂದು ತಿಳಿದು ಬಂದಿದೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದ ಪೊಲೀಸರು, ಸೇನೆಯ 62 ಆರ್‌ಆರ್ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಂತರ ಎನ್ ಕೌಂಟರ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಜಂಟಿ ಪಡೆಗಳ ತಂಡವು ಈ ಪ್ರದೇಶವನ್ನು ಸಮೀಪಿಸಿದಾಗ, ಉಗ್ರರು ಅವರ ಮೇಲೆ ಗುಂಡು ಹಾರಿಸಿದರು, ಇದಕ್ಕೆ ಸೇನೆ ಪ್ರತ್ಯುತ್ತರ ನೀಡಿದ್ದು, ಎನ್ಕೌಂಟರ್ ಸಮಯದಲ್ಲಿ ಮೂವರು ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿದು ಬಂದಿದೆ.
ಇದು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೇ ನಡೆದ ಎರಡನೇ ಎನ್ ಕೌಂಟರ್ ಆಗಿದೆ. ಶುಕ್ರವಾರ ಬೆಳಿಗ್ಗೆ ಕಾಶ್ಮೀರದ ಕುಲ್ಗಂ ಜಿಲ್ಲೆಯಲ್ಲಿ ಮೂವರು ಜೈಶ್ ಉಗ್ರರು ಹತರಾಗಿದ್ದರು