BIG BREAKING NEWS : ‘ಶಿಕ್ಷಕರ ಅರ್ಹತಾ ಪರೀಕ್ಷೆ (TET)’ಗೆ ಅರ್ಜಿ ಆಹ್ವಾನ! ಆಗಸ್ಟ್ 22ಕ್ಕೆ ಪರೀಕ್ಷೆ ಫಿಕ್ಸ್

ಬೆಂಗಳೂರು: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು.

ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಆ. 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ. 12ರಿಂದ ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 39 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 84 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 42 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 23 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ