TRENDING
Next
Prev

ತಮಿಳುನಾಡು ಚುನಾವಣಾ ಮುನ್ನವೇ ರಾಜಕೀಯಕ್ಕೆ ಗುಡ್ ಬೈ ಹೇಳಿದ ಶಶಿಕಲಾ!

ಚೆನ್ನೈ: ಕಳೆದ ಜನವರಿಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಮತ್ತು ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದೇ ನಿರೀಕ್ಷಿಸಲಾಗಿದ್ದ ವಿ.ಕೆ. ಶಶಿಕಲಾ ನಟರಾಜನ್ ಅವರು ರಾಜಕಾರಣ ಮತ್ತು ಸಾರ್ವಜನಿಕ ಜೀವನವನ್ನು ತ್ಯಜಿಸಿದ್ದಾರೆ.

ತಮಿಳುನಾಡು ಚುನಾವಣೆಗೆ ಎರಡು ವಾರ ಬಾಕಿ ಇರುವಾಗಲೇ ಅವರು ಈ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಅವರ ನಾಯಕತ್ವ, ಸ್ಪರ್ಧೆ ಸೇರಿದಂತೆ ತೀವ್ರ ಕುತೂಹಲ ಮತ್ತು ಚರ್ಚೆಯ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

READ ALSO

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ವಿ.ಕೆ.ಶಶಿಕಲಾ ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆ ಹೊತ್ತಲ್ಲೇ ಶಶಿಕಲಾ ಬಿಡುಗಡೆಯಾಗಿರುವುದು ಅವರ ಬೆಂಬಲಿಗರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿತ್ತು. ಅಲ್ಲದೇ ತಮಿಳುನಾಡು ರಾಜಕೀಯದಲ್ಲಿ ಚಿನ್ನಮ್ಮನ ರಾಜಕೀಯ ಪರ್ವ ಆರಂಭವಾಗಲಿದೆ ಎಂದೇ ಹೇಳಲಾಗಿತ್ತು. ಆದರೆ ಈಗ ದಿಢೀರ್ ಆಗಿ ರಾಜಕೀಯಕ್ಕೆ ಗುಡ್ ಬೈ ಹೇಳುವ ಮೂಲಕ ಶಾಕ್ ನೀಡಿದ್ದಾರೆ.